ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಕಿಯೊಳಗನ್ನವನು ಮೊದಲಾರು ಕಂಡವನು? |ಅಕ್ಕರದ ಬರಹಕ್ಕೆ ಮೊದಲಿಗನದಾರು? ||ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ |ದಕ್ಕುವುದೆ ನಿನಗೆ ಜಸ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಅಂತರಂಗವನೆಲ್ಲ ಬಿಚ್ಚಿ ತೋರಿಪನಾರು? |ಆಂತರಗಭೀರಗಳ ತಾನೆ ಕಂಡವನಾರ್? ||ಗಂತಿಗಳು ಗಂಟುಗಳು ಮಡಿಪುಮಡಿಪುಗಳಲ್ಲಿ |ಸ್ವಂತಕೇ ದುರ್ದರ್ಶ - ಮಂಕುತಿಮ್ಮ ||

ಚೆಲುವುನಗುವುಗಳ ಕಂಡವನ ಕಣ್ಣರಳುವುದು |ಅಳುವುನೋವುಗಳ ಕಂಡೊದ್ದೆಯಾಗುವುದು ||ಇಳೆಯ ದನಿಗವನೆದೆಯೊಳೊಪ್ಪು ಮರುದನಿಯಹುದು |ಶಿಲೆಯಲ್ಲ ಯೋಗಿಯೆದೆ - ಮಂಕುತಿಮ್ಮ ||

ತನ್ನ ಮನದಾಟಗಳ ತಾನೆ ನೋಡುತ ನಗುವ |ತನ್ನೊಳಗೆ ತಾನಿರ್ವರಾದವೊಲು ಬಾಳ್ವ ||ಚಿನ್ಮಾತ್ರವನು ಬೇರೆ ಬಗೆದು ಜಾನಿಪ ಚತುರ |ಧನ್ಯತೆಯ ಕಂಡವನು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ