ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಲೆನ್ನಯ ಹೃದಯ ಕರಣಗಳ ಕಾವುಗಳು |ಸೇರಲೆನ್ನಯ ಜೀವ ವಿಶ್ವಜೀವನದಲಿ ||ಧಾರುಣಿಯ ಮಡಿಲೆನ್ನ ಕೊಳಲಿ; ಜಗ ಮರೆತಿರಲಿ |ಹಾರಯಿಸು ನೀನಿಂತು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಎಲ್ಲರಿಗಮಾಗಿ ತಾನ್; ಎಲ್ಲರುಂ ತನಗಾಗಿ |ನಿಲ್ಲುವೇಕಾತ್ಮತೆಯ ಬಾಳ್ವೆಯಿಂ ಕಲಿಯಲ್ ||ಸಲ್ಲುವುಪಕರಣಗಳು ಮನೆ ರಾಜ್ಯ ಸಂಸಾರ- |ವಲ್ಲಗಳೆಯದಿರವನು - ಮಂಕುತಿಮ್ಮ ||

ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |ಮನದ ದೇಹದ ಜೀವದೆಲ್ಲ ಕರಣಗಳಾ ||ಅನುಭವದ ಮುಕುರದೊಳ್ ಪ್ರತಿಫಲಿಸೆ ತನ್ನದೊಂ- |ದಣುವದುವೆ ಸುಂದರವೊ - ಮಂಕುತಿಮ್ಮ ||

ಹೊರಗೆ ಹೊಳೆವೊಂದು ಹೊಳಪಿನ ಕಿರಣವೆನ್ನೆದೆಯೊ- |ಳುರಿಯನೆಬ್ಬಿಸಿ ಹೊಗೆಯನೆರಚಿ ಕಣ್ಗಳಿಗೆ ||ಕೆರಳಿಪುದು ಕರಣಗಳ; ಮರಳಿಪುದು ಹರಣಗಳ |ಹೊರಮೋಹವೊಳದಾಹ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ