ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದು ಬಾಳ್ ಭಂಡತನವಿಹದಿ ಬಾಳ್ ಮುಗಿಯುವೊಡೆ |ಕಹಿಯೊಗರು ಕಾಯಿ; ಮಿಡಿತನದೊಳದು ಮುಗಿಯೆ ||ಸಿಹಿಯಹುದು ಕಾಯಿ ಹಣ್ಣಾಗೆ; ಜೀವಿತವಂತು |ಮಹಿಮೆಗೊಳುವುದು ಮಾಗೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಆರ ಕೈತುತ್ತಿಗಂ ನಿನ್ನ ಕಾಯಿಸದೆ ವಿಧಿ |ಯಾರ ಭುಜಕಂ ನಿನ್ನ ಭಾರವಾಗಿಸದೆ ||ಆರ ಸೆಲೆ ಸುಳಿವುಮಂಟದವೊಲಾಗಿಸಿ ನಿನ್ನ |ಪಾರಗಾಣಿಸ ಬೇಡು - ಮಂಕುತಿಮ್ಮ ||

ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ |ಕಾಯಿಸುತ ಕರಿಯುತ್ತ ಹುರಿಯುತ್ತ ಸುಡುತ ||ಈಯವನಿಯೊಲೆಯೊಳೆಮ್ಮಯ ಬಾಳನಟ್ಟು ವಿಧಿ |ಬಾಯ ಚಪ್ಪರಿಸುವನು - ಮಂಕುತಿಮ್ಮ ||

ಬಿಳಲಲ್ಲಿ; ಬೇರಲ್ಲ; ಮುಂಡಕಾಂಡಗಳಲ್ಲ |ತಳಿರಲ್ಲ; ಮಲರಲ್ಲ; ಕಾಯಿಹಣ್ಣಲ್ಲ ||ಎಲೆ ನೀನು; ವಿಶ್ವವೃಕ್ಷದೊಳ್ ಎಲೆಯೊಳೊಂದು ನೀಂ |ತಿಳಿದದನು ನೆರವಾಗು - ಮಂಕುತಿಮ್ಮ ||

ಮಿಡಿಚೇಪೆಕಾಯಿಗಳ ತಡಬಡದೆ ನುಂಗುವುದು |ಕಡಿಮೆ ಹೊಟ್ಟೆಯಲಿ ಹರಳೆಣ್ಣೆ ಕುಡಿಯುವುದು ||ಬಿಡುತಿರಲು ನೋವಾಗ ಸುಖವೀಗಳೆನ್ನುವುದು |ಪೊಡವಿಗಿದೆ ಭೋಗವಿಧಿ - ಮಂಕುತಿಮ್ಮ ||

ಹಾಲ ಕಾಯಿಸಿ ಹೆಪ್ಪನಿಕ್ಕಿ ಕಡೆದೊಡೆ; ಮೊದಲು |ಮೇಲೆ ಕಾಣದ ಬೆಣ್ಣೆ ತೇಲಿ ಬರುವಂತೆ ||ಬಾಳನೀ ಜಗದ ಮಂತುವು ಕಡೆಯಲೇಳುವುದು |ಆಳದಿಂದಾತ್ಮಮತಿ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ