ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರೆದಿನದ ನಮ್ಮ ಯತ್ನದಿನದೇನೆನ್ನದಿರು |ಕಿರಿದುಮೊಡಗೂಡಿರಲು ಸಿರಿಯಹುದು ಬಾಳ್ಗೆ ||ಪರಿಪೋಷಿಸದೆ ನಿನ್ನೊಡಲ ದಾರಿಮರದ ಫಲ? |ಕಿರುಜಾಜಿ ಸೊಗಕುಡದೆ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತರಣಿ ಕಿರಣದ ನಂಟು ಗಗನ ಸಲಿಲದ ನಂಟು |ಧರಣಿ ಚಲನೆಯ ನಂಟು ಮರುತನೊಳ್ನಂಟು ||ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |ಕಿರಿದು ಪಿರಿದೊಂದಂಟು - ಮಂಕುತಿಮ್ಮ ||

ಬರುವೆಲ್ಲ ಬೇನೆಗಂ ಮದ್ದನಾರಿರಿಸಿಹರು? |ನರರ ಕೀಳ್ತನಕೆಲ್ಲ ಪರಿಹಾರವೆಂತು? ||ಕಿರಿದು ಪಲ್ಲನು ತಾಳಿಕೊಳಲೆಬೇಕಷ್ಟಿಷ್ಟು |ಧರೆಯಂತರುಷ್ಣವನು - ಮಂಕುತಿಮ್ಮ ||

ಬಾಳ್ಕೆಯಲಿ ನೂರೆಂಟು ತೊಡಕು ತಿಣಕುಗಳುಂಟು |ಕೇಳ್ಕೆಮಾಣ್ಕೆಗಳಿಗವು ಜಗ್ಗವೊಂದಿನಿಸುಂ ||ಗೋಳ್ಕರೆದರೇನು ಫಲ ಗುದ್ದಾಡಲೇನು ಫಲ |ಪಲ್ಕಿರಿದು ತಾಳಿಕೊಳೊ - ಮಂಕುತಿಮ್ಮ ||

ಸಿರಿದರಿದ್ರತೆಗಳ್ಗೆ ಫಲದೊಳಂತರ ಕಿರಿದು |ಸರಿತಪ್ಪುಗಳಿಗಂತು; ಜಾಣ್ ಬೆಪ್ಪುಗಳ್ಗಂ ||ಮರಣವೆಲ್ಲವನೊಂದೆ ತೆರದಿ ಮುಸುಕುವುದೆಂದೊ |ಪರವೆಯೆಂತಾದೊಡೇಂ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ