ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಸಳಿನಡಿ ಗಿಡದ ಬಿಗಿ; ಮೇಲೆ ಗಾಳಿಯ ಸರಸ |ಕುಸುಮದ ಕ್ಷೇಮವಾ ಬಿಗಿತ ಬಿಡುತೆಗಳಿಂ ||ಕುಶಲ ಸೌರಭವ ನಿರ್ಯತ್ನ ಸ್ವತಂತ್ರದಿಂ |ಪಸರಿಪಾ ನಯ ಸುಖವೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಕುಸುಮಕೋಮಲಗಾತ್ರ ಶೂರ್ಪಣಖಿಗರಿದಾಯ್ತೆ? |ವಿಷದ ಪೂತನಿ ನಯನಪಕ್ಷ್ಮದೊಳಗಿರಳೆ? ||ಮುಸಿನಗುವಿನೊಳಗಿರಲಶಕ್ಯವೆ ಪಿಶಾಚಿಕೆಗೆ? |ಮೃಷೆಯೊ ಮೈಬೆಡಗೆಲ್ಲ - ಮಂಕುತಿಮ್ಮ ||

ಕುಸುಮಸಖನೇಂ ನೀನು? ಹಿಸುಕದೆಯೆ ಮೂಸದನು |ಹಿಸುಕೆ ಕಟುಕಂಪು; ನರಲೋಕವದರವೊಲೇ ||ಗಸಿಯ ಕಲಕದೆ ಕೊಳದ ಮೇಲ್ತಿಳಿಯ ಕುಡಿದು ನಡೆ |ಹಸನು ಹಗುರದ ಬಾಳು - ಮಂಕುತಿಮ್ಮ ||

ನಗುವೊಂದು ರಸಪಾಕವಳುವೊಂದು ರಸಪಾಕ |ನಗುವಾತ್ಮ ಪರಿಮಳವ ಪಸರಿಸುವ ಕುಸುಮ ||ದುಗುಡವಾತ್ಮವ ಕಡೆದು ಸತ್ತ್ವವೆತ್ತುವಮಂತು |ಬಗೆದೆರಡನುಂ ಭುಜಿಸು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ