ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕ್ಷಮೆ ದೋಷಿಗಳಲಿ; ಕೆಚ್ಚೆದೆ ವಿಧಿಯ ಬಿರುಬಿನಲಿ |ಸಮತೆ ನಿರ್ಮತ್ಸರತೆ ಸೋಲ್ಗೆಲವುಗಳಲಿ ||ಶಮವ ನೀಂ ಗಳಿಸಲೀ ನಾಲ್ಕು ತಪಗಳೆ ಸಾಕು |ಭ್ರಮೆಯೊ ಮಿಕ್ಕೆಲ್ಲ ತಪ - ಮಂಕುತಿಮ್ಮ ||
ಪೆರ್ಮೆಯ ಗುಣಂಗಳಿನ್ನೂರು ಶಾಸ್ತ್ರೋಕ್ತದವು |ಸರ್ವೋತ್ತಮಗಳೆರಡು ಸರ್ವಕಠಿನಗಳು ||ನಿರ್ಮತ್ಸರತೆಯೊಂದು ದೋಷಿಯೊಳ್ ಕ್ಷಮೆಯೊಂದು |ಬಾಹ್ಮಿಕಾಭ್ಯಾಸವದು - ಮಂಕುತಿಮ್ಮ ||
ಸಮವಿಲ್ಲ ಸೃಷ್ಟಿಯಲಿ; ನರನಂತೆ ನರನಿಲ್ಲ |ಕ್ಷಮೆಯುಮವಳೊಳಗಿಲ್ಲ; ಕರ್ಮದಂತೆ ಫಲ ||ಕ್ರಮವೊಂದ ನೀಮಾಗಿಸಿರಿ ನೋಳ್ಪೆನಾನೆನುತೆ |ನಮಗವಳ್ ಪ್ರಸ್ಪರ್ಧಿ - ಮಂಕುತಿಮ್ಮ ||