ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಈ ಜಗದ ಗಂಧ ಪರಿಪರಿ ಹಸಿವ ಕೆಣಕುತಿರೆ |ಭೋಜನವ ನೀಡೆನೆನೆ ಮನ ಸುಮ್ಮನಿಹುದೆ? ||ಸಾಜಗಳ ಕೊಲ್ಲೆನುವ ಹಠಯೋಗಕಿಂತ ಸರಿ |ರಾಜಯೋಗದುಪಾಯ - ಮಂಕುತಿಮ್ಮ ||
ಸೌಂದರ್ಯ ಬಾಂಧವ್ಯಗಳು ಸತ್ಯವಲ್ಲದೊಡೆ |ಕುಂದುವಡೆಯದ ಸತ್ಯವಿಳೆಯೊಳಿನ್ನೆಲ್ಲಿ? ||ಗಂಧಾನಿಲಂಗಳವು ಪರಸತ್ತ್ವಪುಷ್ಪದವು |ಸಂದೇಹವೇನೆಲವೊ - ಮಂಕುತಿಮ್ಮ ||
ಹೆಸರನರಿಯದ ಸಸಿಯೊಳಿರವೆ ರಸಗಂಧಗಳು? |ಬಿಸಿಲದನು ಪಕ್ವಗೊಳಿಸುತೆ ಬಿಡಿಸದಿಹುದೆ? ||ಪಸರಿಸದೆ ಗಾಳಿಯದನೊಯ್ದು ದಿಸೆದಿಸೆಗಳೊಳು? |ಉಸಿರುತಿಹೆವದ ನಾವು - ಮಂಕುತಿಮ್ಮ ||
ಹೇಮಕುಂಭದಿ ಕೊಳಚೆರೊಚ್ಚುನೀರ್ಗಳ ತುಂಬಿ |ರಾಮಣೀಯಕದೊಳಿಟ್ಟಾಮಗಂಧವನು ||ಪ್ರೇಮಪುಷ್ಪಕೆ ಮೊನಚು ಗರಗಸವನಂಚಿರಿಸಿ |ಏಂ ಮಾಡಿದನೊ ಬೊಮ್ಮ! - ಮಂಕುತಿಮ್ಮ ||