ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು? |ಅವುದಬ್ಧಿಯ ತೆರೆಗಳಲಿ ಮೊಟ್ಟಮೊದಲು? ||ಆವುದೆಲರಿನ ನಿಲ್ಲದಲೇತಕ್ಕೆ ಗಡುಸೀಮೆ? |ಈ ವಿಶ್ವಕಥೆಯಂತು - ಮಂಕುತಿಮ್ಮ ||
ಕಡಲ್ಗಳೊಂದಾದೊಡಂ; ಪೊಡವಿ ಹಬೆಯಾದೊಡಂ |ಬಿಡದಿರೊಳನೆಮ್ಮದಿಯ; ಬಿಡು ಗಾಬರಿಕೆಯ ||ಕಡಲ ನೆರೆ ತಗ್ಗುವುದು; ಪೊಡವಿ ಧೂಳಿಳಿಯುವುದು |ಗಡುವಿರುವುದೆಲ್ಲಕಂ - ಮಂಕುತಿಮ್ಮ ||
ಕಾಳನುದಯದಿ ಬಿತ್ತೆ ಸಂಜೆಗದು ಪೈರಹುದೆ? |ಪಾಲುಂಟು ಕಾಲಂಗೆ ನಮ್ಮ ಕೃಷಿಗಳಲಿ ||ವೇಳೆ ಗಡು ಮರೆತಾತುರದಿನ್ ಅಡುಗೆ ಪಕ್ಕಹುದೆ? |ತಾಳುಮೆಯೆ ಪರಿಪಾಕ - ಮಂಕುತಿಮ್ಮ ||
ಧರೆ ಸಸ್ಯಫಲದಿ ಜೀವಿಗೆ ಪುಷ್ಟಿಯಿತ್ತೊಡೇಂ? |ಮರಳಿ ತಾಂ ಪಡೆಯಳೇನ್ ಅವನಿನರ್ಧವನು? ||ಧರಣಿಗೀ ನಮ್ಮೊಡಲು ಹುಯ್ಗಡುಬು ತಪ್ಪಲೆಯೊ! |ಪರಮೇಷ್ಠಿ ಯುಕ್ತಿಯದು - ಮಂಕುತಿಮ್ಮ ||