ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |ಮೆನಿತು ನೀಂ ಪೋರ್ದೆಯೆನಿತನು ಪೊತ್ತೆಯೆನುವರ್ ||ಗಣನೆ ಸಲುವುದು ತೋರ್ದ ಪೌರುಷಕೆ; ಜಯಕಲ್ಲ |ದಿನದಿನದ ಗರಡಿಯಿದು - ಮಂಕುತಿಮ್ಮ ||
ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |ಮನದ ದೇಹದ ಜೀವದೆಲ್ಲ ಕರಣಗಳಾ ||ಅನುಭವದ ಮುಕುರದೊಳ್ ಪ್ರತಿಫಲಿಸೆ ತನ್ನದೊಂ- |ದಣುವದುವೆ ಸುಂದರವೊ - ಮಂಕುತಿಮ್ಮ ||
ಗುಣಿಗುಣಿಸಿ ತಿಣಕುತ್ತ ಹೆಣಗಾಡಿ ಫಲವೇನು |ಗಣನೆಗೆಟುಕದದೊಂದಚಿಂತ್ಯವೆತ್ತಲೊ ತಾನ್ ||ಅಣಗಿರ್ದು ನಿನ್ನೆಲ್ಲ ಗಣಿತಗಳನಣಕಿಪುದು |ದಣಿಯದಾ ವಿಧಿ ವಿಕಟ - ಮಂಕುತಿಮ್ಮ ||
ಜಾನಪದ ಶಿಷ್ಟಿಯಲಿ; ಸಂಪತ್ಸಮಷ್ಟಿಯಲಿ |ಜ್ಞಾನಸಂಧಾನದಲಿ; ಮೌಲ್ಯ ಗಣನೆಯಲಿ ||ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |ಆನಂದ ಧರೆಗಂದು - ಮಂಕುತಿಮ್ಮ ||
ತುಂಬುದಿಟ ಜೀವಿತದ ಗಣನೆಗಳ ಮೀರಿದುದು |ಇಂಬುಗಳ ಬಿಂಬಗಳ ಸನ್ನಿಧಾನವದು ||ಅಂಬರದಿನಾಚಿನದು; ತುಂಬಿರುವುದೆತ್ತಲುಂ |ಶಂಭು ಪರಬೊಮ್ಮನದು - ಮಂಕುತಿಮ್ಮ ||
ನಾಯಕನಿಗಿರಲಿ ರಣವಿಜಯ ಪರಿಭವ ಗಣನೆ |ಆಯವದರಿಂ ಭಟನ ಸತ್ತ್ವಶಿಕ್ಷಣಕೆ ||ಸ್ವೀಯ ಸತ್ತ್ವವಿಕಾಸ ನಿಜಶಕ್ತಿಯಭ್ಯಾಸ |ಶ್ರೇಯಸಿಗೆ ಸೋಪಾನ - ಮಂಕುತಿಮ್ಮ ||
ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ ||ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು |ನೆನೆಯದಾತ್ಮದ ಸುಖವ - ಮಂಕುತಿಮ್ಮ ||
ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ||ಭಿನ್ನಮಿಂತಿರೆ ವಸ್ತುಮೌಲ್ಯಗಳ ಗಣನೆಯೀ |ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ||