ಒಟ್ಟು 14 ಕಡೆಗಳಲ್ಲಿ , 1 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅತ್ಯಂತದುತ್ಕಟದ ಸನ್ನಿವೇಶಗಳ ಭರ |ಪ್ರತ್ಯಕ್ಷದರ್ಶನದಿನಲ್ಲದೆಂತಹುದು? ||ಪುಸ್ತಕದ ಚಿತ್ರದಿಂದೂಹಿಪೆಯ ಹಿಮಗಿರಿಯ |ವಿಸ್ತಾರದದ್ಭುತವ? - ಮಂಕುತಿಮ್ಮ ||
ಅರುಣೋದಯಪ್ರಭೆಯ; ಗಿರಿಶೃಂಗದುನ್ನತಿಯ |ವರುಣಾಲಯಾಯತಿಯ ನಿರುಕಿಸಿದೊಡಹುದೇಂ? ||ಬೆರಗು; ಬರಿಬೆರಗು; ನುಡಿಗರಿದೆನಿಪ್ಪಾನಂದ |ಪರಮಪೂಜೆಯುಮಂತು - ಮಂಕುತಿಮ್ಮ ||
ಇನ್ನೇನು ಮತ್ತೇನು ಗತಿಯೆಂದು ಬೆದರದಿರು |ನಿನ್ನ ಕೈಯೊಳಗಿಹುದೆ ವಿಧಿಯ ಲೆಕ್ಕಣಿಕೆ? ||ಕಣ್ಣಿಗೆಟುಕದೆ ಸಾಗುತಿಹುದು ದೈವದ ಸಂಚು |ತಣ್ಣಗಿರಿಸಾತ್ಮವನು - ಮಂಕುತಿಮ್ಮ ||
ಗಿರಿಯ ಮೇಲಕೆ ದೊಡ್ಡ ಬಂಡೆಯನು ಸಿಸಿಫಸನು |ಉರುಳಿಸಿರಲೊಂದೆರಡು ಮಾರು ಘಾಸಿಯಲಿ ||ಸರಿದು ಕೆಳಕದದೆಂತೊ ಜಾರುವುದು ಮರಮರಳಿ |ಪುರುಷಪ್ರಗತಿಯಂತು - ಮಂಕುತಿಮ್ಮ ||
ಜ್ಞೇಯದ ದ್ವೀಪಕಜ್ಞೇಯಾಬ್ಧಿಯಾವರಣ |ಕಾಯಕದ ಗಿರಿಗೆ ಮಾನಸದಭ್ರಪಟಲ ||ಮೇಯವನು ಬಗೆದೇನಮೇಯ ಸುತ್ತಲುಮಿರಲು? |ಮಾಯೆಯೀ ಮಿಶ್ರಣವೊ - ಮಂಕುತಿಮ್ಮ ||
ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ |ಜಳನಿಧಿಯೊಳಾದಂತೆ ಸುಧೆಗೆ ಪೀಠಿಕೆಯೇಂ? ||ಹಾಳಾಹಳವ ಕುಡಿವ ಗಿರಿಶನಿದ್ದಿರ್ದೊಡೀ |ಕಳವಳವದೇತಕೆಲೊ? - ಮಂಕುತಿಮ್ಮ ||
ದರಿಯಿರದೆ ಗಿರಿಯಿಲ್ಲ; ನೆರಳಿರದೆ ಬೆಳಕಿಲ್ಲ |ಮರಣವಿಲ್ಲದೆ ಜನನಜೀವನಗಳಿಲ್ಲ ||ವರಗುಣೋನ್ನತಿಗೆ ನಿಮ್ನಗುಣಂಗಳೊಡವುಟ್ಟು |ತೆರೆ ಬೀಳದೇಳುವುದೇ - ಮಂಕುತಿಮ್ಮ ||
ನರರ ಸ್ವಭಾವ ವಕ್ರಗಳನೆಣಿಸುವುದೇಕೆ? |ಗಿರಿ ಕಣಿವೆಗಳ ಗಣಿಸಿ ರೋಷಗೊಳ್ಳುವೆಯೇಂ? ||ಸುರೆ ಗರಲ ಸುಧೆಗಳ್ ಅಬ್ಧಿಯಲಿ ಸೋದರರಲ್ತೆ |ಅರಿತೊಗ್ಗು ಸಾಜಕ್ಕೆ - ಮಂಕುತಿಮ್ಮ ||
ಪ್ರಾಲೇಯಗಿರಿಗುಹೆಯ ಗಂಗೆ ವೇದ ಪುರಾಣ |ಕಾಳಿಂದಿ ಶೋಣೆ ಪೌರುಷ ಬುದ್ಧಿಯುಕ್ತಿ ||ಮೂಲ ಸ್ವತಸ್ಸಿದ್ಧ ಸಂವಿದಾಪಗೆಗಿಂತು |ಕಾಲದುಪನದಿ ನೆರವು - ಮಂಕುತಿಮ್ಮ ||
ಭಕ್ತಿ ನಂಬುಗೆ ಸುಲಭ; ಭಜನೆ ವಂದನೆ ಸುಲಭ |ತತ್ತ್ವಶೋಧನೆ ಕಷ್ಟ; ಮತಿಕಾರ್ಯ ಕಷ್ಟ ||ಸುತ್ತುವುದು ಗಿರಿಸುತ್ತ ಸುಳುವೆಂದು ಲೋಕಜನ |ಹತ್ತುವನು ತಾಪಸಿಯೊ - ಮಂಕುತಿಮ್ಮ ||
ಸಿಂಧುವನು ಹಿಮಗಿರಿಗೆ ಹಿಂದಿರುಗಿ ಬೇರೊಂದು |ಚೆಂದದಲಿ ಪರಿದು ಬಾರೆಂದಾಣತಿಪೆಯಾ? ||ಸಂದರ್ಭವಿಡಿದು ಜನಚೈತನ್ಯ ಪರಿದಿಹುದು |ಅಂಧಗತಿಯಲ್ಲವದು - ಮಂಕುತಿಮ್ಮ ||
ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? |ಕ್ರಿಮಿಗೆ ಹಸಿವುಂಟಿನಿತು ಬೆದಕಾಟಮುಂಟು ||ಅಮಿತ ಸಂತತಿಯುಂಟು ಹಿಮಗಿರಿಯ ಸಮಯುಗದ |ಕ್ರಿಮಿಪಂಕ್ತಿ ಕಿರಿದಹುದೆ? - ಮಂಕುತಿಮ್ಮ ||
ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ |ಸ್ತಿಮಿತದಿಂ ನಿಂತಿರ್ಪುದದು ಧರೆಯ ಹಿತಕೆ ||ಶಮದ ಸುಂದರದ ಸಾತ್ತ್ವಿಕದ ಗಾಂಭೀರ್ಯವದು |ನಮಗೊಂದು ವೇದನಿಧಿ - ಮಂಕುತಿಮ್ಮ ||