ಒಟ್ಟು 51 ಕಡೆಗಳಲ್ಲಿ , 1 ವಚನಕಾರರು , 41 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಣಗಿದ್ದು ಬೇಸಗೆಯೊಳ್; ಎದ್ದು ಮಳೆ ಕರೆದಂದು |ಗುಣಿಯೆನದೆ ತಿಟ್ಟೆನದೆ ಸಿಕ್ಕಿದೆಡೆ ಬೆಳೆದು ||ಉಣಿಸನೀವನು ದನಕೆ; ತಣಿವನೀವನು ಜಗಕೆ |ಗುಣಶಾಲಿ ತೃಣಸಾಧು - ಮಂಕುತಿಮ್ಮ ||
ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ |ಗುಣಿಸುವನು ಭೂತಶಕ್ತಿಗಳನದರಿಂದೇಂ? ||ಗಣಿತಸಾಧ್ಯದ ಹಿಂದಗಣ್ಯದ ಮಹತ್ತತ್ತ್ವ |ವಣಗಿಹುದು ಮೂಲವದು - ಮಂಕುತಿಮ್ಮ ||
ಅನಿಲಗುಣ ಭೂಗುಣಗಳಿಂ ಸಸ್ಯಧಾನ್ಯಗುಣ |ತನುಗುಣಗಳನ್ನದಿಂ; ಮನದ ಗುಣ ತನುವಿಂ ||ಜನಪದವಿಧಂಗಳಿಂತಾಗಿಹುವು ಸೃಷ್ಟಿಯಿನೆ |ಮನುವೊಬ್ಬ; ಜನತೆ ಶತ - ಮಂಕುತಿಮ್ಮ ||
ಎತ್ತಲೋ ಕಾಡುಮಬ್ಬಿನ ಬಳ್ಳಿ ಮೊಗ್ಗಿನಲಿ |ಚಿತ್ರರಚನೆಗದೇಕೆ ತೊಡಗುವಳ್ ಪ್ರಕೃತಿ? ||ಕೃತ್ಯಕ್ಕೆ ತಾಂ ತರುವ ಶಕ್ತಿಗುಣಪೂರ್ಣತೆಯೆ |ಸಾರ್ಥಕವೊ ಜೀವಿತಕೆ - ಮಂಕುತಿಮ್ಮ ||
ಎರಡುತೆರ ಮೌಲ್ಯಂಗಳೆಲ್ಲಕಂ ಲೋಕದಲಿ |ಪರಮಾರ್ಥಕೊಂದು; ಸಾಂಪ್ರತದರ್ಥಕೊಂದು ||ಪರಿಕಿಸೆರಡಂ ನೀನು; ಹೊರಬೆಲೆಯ ಗುಣಿಪಂದು |ಮರೆಯಬೇಡೊಳಬೆಲೆಯ - ಮಂಕುತಿಮ್ಮ ||
ಎಲ್ಲರುಂ ಜಿತಮನಸ್ಕರೆ ದೈವ ವಿಧಿ ಮಾಯೆ |ಚೆಲ್ವುರೂಪಿಂ ಬಂದು ಕಣ್ಕುಕ್ಕುವನಕ ||ವಲ್ಗುರೂಪ ಸುಭದ್ರೆ ಕಣ್ಮುಂದೆ ಸುಳಿವನಕ |ಫಲ್ಗುಣನು ಸಂನ್ಯಾಸಿ - ಮಂಕುತಿಮ್ಮ ||
ಒರ್ವ ನಾನೆಂದು ನೀನೆಂತು ತಿಳಿಯುವೆ ಜಗದಿ? |ನೂರ್ವರಣಗಿಹರು ನಿನ್ನಾತ್ಮಕೋಶದಲಿ ||ಪೂರ್ವಿಕರು; ಜತೆಯವರು; ಬಂಧುಸಖಶತ್ರುಗಳು |ಸರ್ವರಿಂ ನಿನ್ನ ಗುಣ - ಮಂಕುತಿಮ್ಮ ||
ಓರೊರ್ವನಿಚ್ಛೆಗುಣವೊಂದೊಂದು ಬಗೆ ಜಗದಿ |ಭಾರಮೋರೊರ್ವನಿಂಗೊಂದೊಂದು ತೆರದಿ ||ದಾರಗಳಿನವರ ವಿಧಿ ಪಿಡಿದು ಕುಣಿದಾಡಿಸಲು |ನೂರುಜಡೆಕೋಲಾಟ - ಮಂಕುತಿಮ್ಮ ||
ಕೃತ್ರಿಮವೊ ಜಗವೆಲ್ಲ | ಸತ್ಯತೆಯದೆಲ್ಲಿಹುದೊ? |ಕರ್ತೃವೆನಿಸಿದನೆ ತಾಂ ಗುಪ್ತನಾಗಿಹನು ||ಚತ್ರವೀ ಜಗವಿದರೊಳಾರ ಗುಣವೆಂತಹುದೊ! |ಯಾತ್ರಿಕನೆ; ಜಾಗರಿರೊ - ಮಂಕುತಿಮ್ಮ ||
ಕ್ಲೇಶ ನೂರಾಗಿರೆಯುಮಾಶೆಗಳ ಪುನರುದಯ |ಬೇಸರದ ನುಡಿಯೊಳಂ ಲೇಸುಗಳ ನೆನಪು ||ಆಶೆ ಸಾಯ್ತೆಂದೊಡಂ ಚೆಲುವೆನಲು ಕಣ್ಣಲೆತ |ಮಾಸವೀ ಜೀವಗುಣ - ಮಂಕುತಿಮ್ಮ ||
ಕ್ಷಿತಿರುಹಕೆ ಸುಮಫಲಮುಹೂರ್ತ ನಿಶ್ಚಿತವೇನು? |ಮತಿಮನಂಗಳ ಕೃಷಿತಪಃಫಲವುಮಂತು ||ಸತತಕೃಷಿ; ಬೀಜಗುಣ; ಕಾಲವರ್ಷಗಳೊದವೆ |ಪ್ರತಿಭೆ ವಿಕಸಿತವಹುದೊ - ಮಂಕುತಿಮ್ಮ ||
ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |ಮನದ ದೇಹದ ಜೀವದೆಲ್ಲ ಕರಣಗಳಾ ||ಅನುಭವದ ಮುಕುರದೊಳ್ ಪ್ರತಿಫಲಿಸೆ ತನ್ನದೊಂ- |ದಣುವದುವೆ ಸುಂದರವೊ - ಮಂಕುತಿಮ್ಮ ||
ಗರುವಭಂಗವನಾಗಿಸಿದನು ಗರುಡಂಗೆ ಹರಿ |ಮುರಿಯಿಸಿದನಂತೆ ಫಲುಗುಣನ ಹೆಮ್ಮೆಯನು ||ಕರುಬುವಂ ವಿಧಿ ಸೈಸನಾರೊಳಂ ದರ್ಪವನು |ಶಿರವ ಬಾಗಿಹುದೆ ಸರಿ - ಮಂಕುತಿಮ್ಮ ||
ಗುಣಿಗುಣಿಸಿ ತಿಣಕುತ್ತ ಹೆಣಗಾಡಿ ಫಲವೇನು |ಗಣನೆಗೆಟುಕದದೊಂದಚಿಂತ್ಯವೆತ್ತಲೊ ತಾನ್ ||ಅಣಗಿರ್ದು ನಿನ್ನೆಲ್ಲ ಗಣಿತಗಳನಣಕಿಪುದು |ದಣಿಯದಾ ವಿಧಿ ವಿಕಟ - ಮಂಕುತಿಮ್ಮ ||
ಗೃಹದಿ ರಾಷ್ಟ್ರದಿ ಸಮಾಜದಿ ಲೋಕಸಂಗತದಿ |ವಿಹಿತದ ಸ್ಥಾನದಿಂ ಸಹಜಗುಣಬಲದಿಂ- ||ದಿಹಪರಸಮನ್ವಯದೆ ಸರ್ವಹಿತಸಂಸ್ಥಿತಿಗೆ |ಸಹಕರಿಪುದಲೆ ಧರ್ಮ - ಮಂಕುತಿಮ್ಮ ||