ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅನಿಲಗುಣ ಭೂಗುಣಗಳಿಂ ಸಸ್ಯಧಾನ್ಯಗುಣ |ತನುಗುಣಗಳನ್ನದಿಂ; ಮನದ ಗುಣ ತನುವಿಂ ||ಜನಪದವಿಧಂಗಳಿಂತಾಗಿಹುವು ಸೃಷ್ಟಿಯಿನೆ |ಮನುವೊಬ್ಬ; ಜನತೆ ಶತ - ಮಂಕುತಿಮ್ಮ ||
ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |ಮನದ ದೇಹದ ಜೀವದೆಲ್ಲ ಕರಣಗಳಾ ||ಅನುಭವದ ಮುಕುರದೊಳ್ ಪ್ರತಿಫಲಿಸೆ ತನ್ನದೊಂ- |ದಣುವದುವೆ ಸುಂದರವೊ - ಮಂಕುತಿಮ್ಮ ||
ತನ್ನ ಶಕ್ತಿಯನಳೆದು; ತನ್ನ ಗುಣಗಳ ಬಗೆದು |ಸನ್ನಿವೇಶದ ಸೂಕ್ಷ್ಮವರಿತು; ಧೃತಿದಳೆದು ||ತನ್ನ ಕರ್ತವ್ಯಪರಿಧಿಯ ಮೀರದುಜ್ಜುಗಿಸೆ |ಪುಣ್ಯಶಾಲಿಯ ಪಾಡು - ಮಂಕುತಿಮ್ಮ ||
ನಿನ್ನ ಕಹಿಸಿಹಿಯೆಲ್ಲ ಕಡಲೊಳುಪ್ಪಾಗುವುದು |ನಿನ್ನೆಲ್ಲ ಗುಣಗಳುಂ ಬ್ರಹ್ಮದೊಳಗಂತು ||ಪುಣ್ಯವೋ; ಪಾಪವೋ; ಅಹಿತವೋ; ಹಿತವೊ ಅದು |ಚೆನ್ನಹುದು ಬೊಮ್ಮನಲಿ - ಮಂಕುತಿಮ್ಮ ||
ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ |ಇಷ್ಟ ಮೋಹಕ ದಿವ್ಯಗುಣಗಳೊಂದು ಕಡೆ ||ಕಷ್ಟ ಬೀಭತ್ಸ ಘೋರಂಗಳಿನ್ನೊಂದು ಕಡೆ |ಕ್ಲಿಷ್ಟವೀ ಬ್ರಹ್ಮಕೃತಿ - ಮಂಕುತಿಮ್ಮ ||