ಒಟ್ಟು 17 ಕಡೆಗಳಲ್ಲಿ , 1 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರಸನೊಬ್ಬನಲ್ಲ; ಮೂವರು ಬಾಳನಾಳುವರು |ನರ ಕರುಮ ದೈವಗಳು; ತೊಡಕದಕೆ ಸಾಜ ||ಗುರಿಯಿಡದ; ಮೊದಲು ಕೊನೆಯಿರದ; ದರಬಾರಿನಲಿ |ಸರಿಯೇನೊ ತಪ್ಪೇನೊ? - ಮಂಕುತಿಮ್ಮ ||
ಏನು ಪ್ರಪಂಚವಿದು! ಏನು ಧಾಳಾಧಾಳಿ! |ಏನದ್ಭುತಾಪಾರಶಕ್ತಿನಿರ್ಘಾತ! ||ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು? |ಏನರ್ಥವಿದಕೆಲ್ಲ? - ಮಂಕುತಿಮ್ಮ ||
ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು |ಬ್ರಹ್ಮಲೀಲೆಗೆ ಗೊತ್ತುಗುರಿ ಲೆಕ್ಕವಿಲ್ಲ ||ಸುಮ್ಮನಿರು ನಿನ್ನ ಪಾಡನು ಪಡುತ ತುಟಿ ಬಿಗಿದು |ನೆಮ್ಮದಿಗೆ ದಾರಿಯದು - ಮಂಕುತಿಮ್ಮ ||
ಕಲ್ಮಷದ ವಲ್ಮೀಕವೆಂದೊಡಲ ಜರೆಯದಿರು |ಬ್ರಹ್ಮಪುರಿಯೆಂದದನು ಋಷಿಗಳೊರೆದಿಹರು ||ಹಮ್ಮುಳ್ಳ ಹಯವ ಕಾಪಿಟ್ಟು ಕಡಿವಣ ತೊಡಿಸೆ |ನಮ್ಮ ಗುರಿಗೈದಿಪುದು - ಮಂಕುತಿಮ್ಮ ||
ಕಳವಳವ ನೀಗಿಬಿಡು; ತಳಮಳವ ದೂರವಿಡು |ಕಳೆ; ತಳ್ಳು ಗಲಭೆ ಗಾಬರಿಯ ಮನದಿಂದ ||ಅಲೆದಾಡುತಿರೆ ದೀಪ ಕಣ್ಗೆ ಗುರಿ ತಪ್ಪುವುದು |ತಿಳಿತಿಳಿವು ಶಾಂತಿಯಲಿ - ಮಂಕುತಿಮ್ಮ ||
ಗುರಿಯನೈದದೊಡೊಮ್ಮೆ ಮರಳಿ ನೀನುಜ್ಜುಗಿಸು |ಕರಯುಕ್ತಿ ಪೆರ್ಚಿಯೋ; ದೈವ ಕರುಣಿಸಿಯೋ ||ಕರುಮಋಣ ಸಂಧಿಸಿಯೊ ಕೈಗೂಡಬಹುದು ಗುರಿ |ಪರವೆಯಿಡದುಜ್ಜುಗಿಸು - ಮಂಕುತಿಮ್ಮ ||
ತಿರುತಿರುಗಿ ತಿರುಗುತ್ತೆ ಬುಗುರಿ ತಾನೇ ಸೋತು |ತಿರೆಗುರುಳುವುದು ತನ್ನ ಬಲವ ತಾಂ ಕಳೆದು ||ನರನುಮಂತೆಯೆ ಸುತ್ತಿ ಸುತ್ತಿ ಕಡೆಗೊಂದು ದಿನ |ತೆರುವನಸ್ಥಿಯ ಧರೆಗೆ - ಮಂಕುತಿಮ್ಮ ||
ದಾರಿಗುರಿಗಳ ಗೊತ್ತು ಕಗೆಗುಂಟೇನಯ್ಯಾ? |ಆರ ಮನೆ ಸಂಡಿಗೆಯೊ; ಚುಂಡಿಲಿಯೊ; ಹುಳುವೋ ||ಆರ ಪಿಂಡವೊ; ಏನೊ; ಎಂತೊ; ಆ ಬಾಳ ಗತಿ! |ಮೀರಿದವನೇಂ ನೀನು? - ಮಂಕುತಿಮ್ಮ ||
ಧರೆಯ ಬದುಕೇನದರ ಗುರಿಯೇನು ಫಲವೇನು? |ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ||ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ |ನರನು ಸಾಧಿಪುದೇನು? - ಮಂಕುತಿಮ್ಮ ||
ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ |ಮೇರುವನು ಮರೆತಂದೆ ನಾರಕಕೆ ದಾರಿ ||ದೂರವಾದೊಡದೇನು? ಕಾಲು ಕುಂಟಿರಲೇನು? |ಊರ ನೆನಪೇ ಬಲವೊ - ಮಂಕುತಿಮ್ಮ ||
ನಶ್ವರಾಕೃತಿ ನಾಮಮಯ ವಿಶ್ವವಾರ್ಧಿಯಿದು |ಶಾಶ್ವತಬ್ರಹ್ಮದುಚ್ಛ್ವಾಸ ಘನ ಬಿಂದು ||ನಿಶ್ವಸಿತದಲೆಗಳನೆ ಪಿಡಿದು ಗುರಿಯರಿತೀಜೆ |ವಿಶ್ವಮೂಲಾಪ್ತಿಯಲ - ಮಂಕುತಿಮ್ಮ ||
ಪರಬೊಮ್ಮನೀ ಜಗವ ರಚಿಸಿದವನಾದೊಡದು |ಬರಿಯಾಟವೋ ಕನಸೊ ನಿದ್ದೆ ಕಲವರವೋ? ||ಮರುಳನವನಲ್ಲದೊಡೆ ನಿಯಮವೊಂದಿರಬೇಕು |ಗುರಿಗೊತ್ತದೇನಿಹುದೊ? - ಮಂಕುತಿಮ್ಮ ||
ಪೌರುಷಾಶ್ವಕ್ಕಾಶೆ ಛಾಟಿ; ಭಯ ಕಡಿವಾಣ |ಹಾರಾಟವದರದಾ ವೇಧೆಗಳ ನಡುವೆ ||ಧೀರನೇರಿರೆ; ಹೊಡೆತ ಕಡಿತವಿಲ್ಲದೆ ಗುರಿಗೆ |ಸಾರುವುದು ನೈಜದಿಂ - ಮಂಕುತಿಮ್ಮ ||
ಬಾಳಿನೊಳಕಿಚ್ಚು ದೆಸೆದೆಸೆಗುರಿಯ ಚಾಚುತಿರೆ |ಕಾಲನೆನ್ನುವ ಹುಚ್ಚ ಮಣ್ಣನೆರಚುತಿರೆ ||ಧೂಳು ಹೊಗೆಗಳ ಹೊರತು ಜಗದಿ ಬೇರಿಲ್ಲದಿರೆ |ಮೇಲೇನು? ಬೀಳೇನು? - ಮಂಕುತಿಮ್ಮ ||
ಶರನಿಧಿಯನೀಜುವನು; ಸಮರದಲಿ ಕಾದುವನು |ಗುರಿಯೊಂದನುಳಿದು ಪೆರತೊಂದ ನೋಡುವನೆ? ||ಮರೆಯುವನು ತಾನೆಂಬುದನೆ ಮಹಾವೇಶದಲಿ |ನಿರಹಂತೆಯದು ಮೋಕ್ಷ - ಮಂಕುತಿಮ್ಮ ||