ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆನೆಗಾರ್ ಇರುವೆಗಾರ್ ಕಾಗೆಗಾರ್ ಕಪ್ಪೆಗಾರ್ |ಕಾಣಿಸುವರನ್ನವನು? ಹಸಿವವರ ಗುರುವು ||ಮಾನವನುಮಂತುದರಶಿಷ್ಯನವನಾ ರಸನೆ |ನಾನಾವಯವಗಳಲಿ - ಮಂಕುತಿಮ್ಮ ||
ಒಂದು ಕೊಂಬೆಯು ಬಾಡಲಿನ್ನೊಂದು ಚಿಗುರುವುದು |ಸಂದಿಹುದು ಚಿರನವತೆಯಶ್ವತ್ಥಮರಕೆ ||ಎಂದೆಂದುಮಂತಿರುವುದೀ ವಿಶ್ವವೃಕ್ಷವದ |ರೊಂದು ರೆಂಬೆಯೊ ನೀನು - ಮಂಕುತಿಮ್ಮ ||
ಪುರುಷನ ಸ್ವಾತಂತ್ರ್ಯವವನ ತೋಳ್ಗಿರುವಷ್ಟು |ಪರಿಧಿಯೊಂದರೊಳದರ ಯತ್ನಕೆಡೆಯುಂಟು ||ತಿರುಗುವುದು ಮಡಿಸುವುದು ನಿಗುರುವುದು ನೀಳುವುದು |ತೊರೆದು ಹಾರದು ತೋಳು - ಮಂಕುತಿಮ್ಮ ||
ಮನೆಯೆ ಮಠವೆಂದು ತಿಳಿ; ಬಂಧು ಬಳಗವೆ ಗುರುವು |ಅನವರತಪರಿಚರ್ಯೆಯವರೊರೆವ ಪಾಠ ||ನಿನಗುಳಿದ ಜಗವ ಮುಟ್ಟಿಪ ಸೇತು ಸಂಸಾರ |ಮನಕೆ ಪುಟಸಂಸ್ಕಾರ - ಮಂಕುತಿಮ್ಮ ||