ಒಟ್ಟು 10 ಕಡೆಗಳಲ್ಲಿ , 1 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಗಸದ ಬಾಗು; ಚಂದ್ರಮನ ಗುಂಡಿನ ನುಣ್ಪು |ಸಾಗರದ ತೆರೆವಂಕು; ಗಿಡಬಳ್ಳಿ ಬಳುಕು ||ಮೇಘವರ್ಣಚ್ಛಾಯೆ---ಯೀಸೃಷ್ಟಿಯಿಂ ನಮ್ಮೊ |ಳಾಗಿಹುದು ರೂಪರುಚಿ - ಮಂಕುತಿಮ್ಮ ||
ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ |ಫಲ ಮಾಗುವಂದು ತುತ್ತೂರಿ ದನಿಯಿಲ್ಲ ||ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ |ಹೊಲಿ ನಿನ್ನ ತುಟಿಗಳನು - ಮಂಕುತಿಮ್ಮ ||
ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ? |ಅರಿಯುವಂ ಸೋಂಕಿಂದೆ ಬಿಸಿಲುತಣಿವುಗಳ ||ನರನುಮಂತೆಯೆ ಮನಸಿನನುಭವದಿ ಕಾಣುವನು |ಪರಸತ್ತ್ವಮಹಿಮೆಯನು - ಮಂಕುತಿಮ್ಮ ||
ಚೂರುಗಳು ಹದಿನಾರು ಚಂದ್ರಮಂಡಲಕಂತೆ |ನೂರಾರು ಚೂರುಗಳು ಸತ್ಯಚಂದ್ರನವು ||ಸೇರಿಸುತಲವುಗಳನು ಬಗೆಯರಿತು ಬೆಳಸುತಿರೆ |ಸಾರ ಋತಪೂರ್ಣಿಮೆಯೊ - ಮಂಕುತಿಮ್ಮ ||
ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? |ದಿನಪನದೆ? ಚಂದ್ರನದೆ? ನೀರಿನದೆ? ನಿನದೆ? ||ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು |ಗುಣಕೆ ಕಾರಣವೊಂದೆ? - ಮಂಕುತಿಮ್ಮ ||
ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತೆತ್ತಲುಂ |ಮೂಲೆಮುಲೆಯಲಿ ವಿದ್ಯುಲ್ಲಹರಿಯೊಂದು ||ಧೂಲಿಕಣ ಭೂಗೋಳ ರವಿ ಚಂದ್ರ ತಾರೆಗಳ |ಚಾಲಿಪುದು ಬಿಡು ಕೊಡದೆ - ಮಂಕುತಿಮ್ಮ ||
ವಿಶ್ವಪರಿಧಿಯದೆಲ್ಲೊ ಸೂರ್ಯಚಂದ್ರರಿನಾಚೆ |ವಿಶ್ವಕೇಂದ್ರವು ನೀನೆ; ನೀನೆಣಿಸಿದೆಡೆಯೆ ||ನಿಃಶ್ವಸಿತ ಸಂಬಂಧ ನಿನಗಂ ದಿಗಂತಕಂ |ಪುಷ್ಪವಾಗಿರು ನೀನು - ಮಂಕುತಿಮ್ಮ ||
ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ |ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ||ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ |ಕರುಮಗತಿ ಕೃತ್ರಿಮವೊ - ಮಂಕುತಿಮ್ಮ ||
ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ ||ಹಳೆಯವಿವು ನೀನಿದರೊಳಾವುದನು ಕಳೆದೀಯೊ? |ಹಳದು ಹೊಸತರೊಳಿರದೆ? - ಮಂಕುತಿಮ್ಮ ||