ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಒಂದಗಳು ಹೆಚ್ಚಿರದು; ಒಂದಗಳು ಕೊರೆಯಿರದು |ತಿಂದು ನಿನ್ನನ್ನಋಣ ತೀರುತಲೆ ಪಯಣ ||ಹಿಂದಾಗದೊಂದು ಚಣ; ಮುಂದಕುಂ ಕಾದಿರದು |ಸಂದ ಲೆಕ್ಕವದೆಲ್ಲ - ಮಂಕುತಿಮ್ಮ ||
ಕಾರುಣ್ಯ ಸರಸ ಸೌಂದರ್ಯ ರುಚಿಗಳೆ ಸೃಷ್ಟಿ- |ಕಾರಣಮೆನಿಪ್ಪವೊಲು ತೋರ್ಪುದೊಂದು ಚಣ ||ಕಾರ್ಪಣ್ಯ ಕಟುಕತೆಗಳೆನಿಪುದಿನ್ನೊಂದು ಚಣ |ತೋರದಾವುದು ದಿಟವೊ - ಮಂಕುತಿಮ್ಮ ||
ಬೆದಕಾಟ ಬದುಕೆಲ್ಲ; ಚಣಚಣವು ಹೊಸ ಹಸಿವು |ಅದಕಾಗಿ ಇದಕಾಗಿ ಮತ್ತೊಂದಕಾಗಿ ||ಅಧಿಕಾರ ಸಿರಿ ಸೊಗಸು ಕೀರ್ತಿಗಳ ನೆನೆದು ಮನ |ಕುದಿಯುತಿಹುದಾವಗಂ - ಮಂಕುತಿಮ್ಮ ||
ಬೊಮ್ಮನೇ ಸಂಸ್ಕೃತಿಯ ಕಟ್ಟಿಕೊಂಡುತ್ಸಹಿಸೆ |ಸುಮ್ಮನರೆಚಣವಿರದೆ ಪ್ರಕೃತಿ ತೊಡಗುತಿರೆ ||ಜನ್ಮ ಸಾಕೆನುವುದೇಂ? ದುಮ್ಮಾನವಡುವುದೇಂ? |ಚಿಮ್ಮುಲ್ಲಸವ ಧರೆಗೆ - ಮಂಕುತಿಮ್ಮ ||