ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? |ಚಂಡಚತುರೋಪಾಯದಿಂದಲೇನಹುದು? ||ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು |ಅಂಡಲೆತವಿದಕೇನೊ? - ಮಂಕುತಿಮ್ಮ ||
ತನ್ನ ಮನದಾಟಗಳ ತಾನೆ ನೋಡುತ ನಗುವ |ತನ್ನೊಳಗೆ ತಾನಿರ್ವರಾದವೊಲು ಬಾಳ್ವ ||ಚಿನ್ಮಾತ್ರವನು ಬೇರೆ ಬಗೆದು ಜಾನಿಪ ಚತುರ |ಧನ್ಯತೆಯ ಕಂಡವನು - ಮಂಕುತಿಮ್ಮ ||
ತ್ರಾಸಿನಲಿ ಕಪ್ಪೆಗಳ ಸರಿಕೂಡಿಸುವ ಚತುರಿ |ಸಂಸೃತಿ ದ್ವಂದ್ವಗಳ ಸಮತೂಗಲರಿವಂ ||ಬೀಸುಕತ್ತಿಗಳ ಮಧ್ಯದಿ ನೂಲಮೇಲ್ ನಡೆವ |ಸಾಸವೀ ಗೃಹಧರ್ಮ - ಮಂಕುತಿಮ್ಮ ||
ಮನದ ಭಾವಗಳ ಪೂರ್ಣದಿನೊರೆಯಲರಿತ ಕವಿ |ಇನಿತನುಂ ಬಿಡದೆ ರೂಪಿಸಲರಿತ ಶಿಲ್ಪಿ ||ಅನುರೂಪದಿಂದ ವಾಸ್ತವಗೊಳಿಪ ಕೃತಿಚತುರ |ಧನಿಯರಿವರೆಲ್ಲಿಹರೊ? - ಮಂಕುತಿಮ್ಮ ||
ಯುಕ್ತಿಸಾಮ್ರಾಜ್ಯದಲಿ ಭಕ್ತಿ ಬಡ ಪರದೇಶಿ |ಶಕ್ತಿ ಚತುರತೆಯುಡುಗಿ ನೀನು ಸೋತಂದು ||ಉತ್ಕ್ರಮಣದರೆಮನದಿ ದೈವವನು ಪಿಡಿದೇನು? |ಭಕ್ತಿ ರಕ್ತದಿ ಪರಿಗೆ - ಮಂಕುತಿಮ್ಮ ||