ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಾಕತಾಳೀಯ ಕಥೆ ಲೋಕಚರಿತೆಯೊಳೆಷ್ಟೊ! |ಟೀಕೆಗೆಟುಕವು ನಮಗೆ ಕಾರ್ಯಕಾರಣಗಳ್ ||ಏಕೊ ಕಣ್ಣಲೆಯುವುದು; ಏನೊ ಅದ ಪಿಡಿಯುವುದು |ವ್ಯಾಕುಲತೆ ಫಲಿತಾಂಶ - ಮಂಕುತಿಮ್ಮ ||
ಕ್ಷಿತಿಚಕ್ರ ರವಿಚಕ್ರ ಋತುಚಕ್ರಗಳಿಗಿಹುದು |ಮಿತವೃತ್ತಿ; ನರನಿಗಂತೆಯೆ ಕರ್ಮನಿಯತಿ ||ಕ್ಷಿತಿಕಂಪ ರಾಹುಕೇತುಭ್ರಮೆ ನರಪ್ರಗತಿ |ಅತಿಚರಿತೆ ಪ್ರಕೃತಿಯಲಿ - ಮಂಕುತಿಮ್ಮ ||
ದಿವ್ಯಚರಿತಂಗಳ ಪ್ರತ್ಯುಕ್ತಿ ನರಚರಿತೆ |ಕಾವ್ಯವಿಜ್ಞಾನಗಳ್ ನಿಗಮಾನುಸರಗಳ್ ||ನವ್ಯಸಂಪದವಾರ್ಷಸಂಪದುದ್ಧೃತವಿಂತು |ಸವ್ಯಪೇಕ್ಷಗಳುಭಯ - ಮಂಕುತಿಮ್ಮ ||
ನಾಸಿಕದ ಮಾಟದಿಂದಾ ಕ್ಲಿಯೋಪ್ಯಾಟ್ರಳಿಗೆ |ದಾಸರಾದರು ಶೂರ ಸೀಸರ್ ಆಂಟನಿಗಳ್ ||ದೇಶಚರಿತೆಗಮವರ ಜಸಕಮಂಕುಶವಾಯ್ತು |ನಾಸಾಪುಟದ ರೇಖೆ - ಮಂಕುತಿಮ್ಮ ||
ಮಾನುಷದ ಚರಿತೆ ಪರಸತ್ತ್ವಸಾಕ್ಷಾತ್ಕವಿತೆ |ಕಾಣಿಪುದದಾತ್ಮ ಸ್ವಭಾವದುದ್ಗಮವ ||ಏನಾಶೆ! ಯೇನು ಸಾಹಸ! ವೇನು ಭಂಗಗಳು! |ಅನುಭವವೇದವದು - ಮಂಕುತಿಮ್ಮ ||
ಮಾನುಷ್ಯಚರಿತೆಯಚ್ಛಿನ್ನವಾಹಿನಿ ಸಾಗ |ಲಾನುಪೂರ್ವ್ಯದ ಕರ್ಮಋಣಶೇಷವಿನಿತು ||ತಾನಿರಲೆಬೇಕಲ್ತೆ ಪೌರುಷಸ್ಪರ್ಧನೆಗೆ |ಆನೆಗಂಕುಶದಂತೆ - ಮಂಕುತಿಮ್ಮ ||
ವಕ್ತ್ರವುಂಟೆಲ್ಲರಿಗೆ; ವರ್ಚಸೋರೊರ್ವರಿಗೆ |ಕತ್ತಿ ಪಣ್ಯದೊಳುಂಟು; ಶಕ್ತಿ ಸಹಜದಲಿ ||ವ್ಯಕ್ತಿಪ್ರಭಾವವೀ ಲೋಕಚರಿತೆಯ ಕೀಲು |ಹಸ್ತವದು ದೈವಕೆಲೊ - ಮಂಕುತಿಮ್ಮ ||
ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ ||ಹಳೆಯವಿವು ನೀನಿದರೊಳಾವುದನು ಕಳೆದೀಯೊ? |ಹಳದು ಹೊಸತರೊಳಿರದೆ? - ಮಂಕುತಿಮ್ಮ ||