ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆತುರತೆಯೇನಿರದು ವಿಧಿಯಂತ್ರಚಲನೆಯಲಿ |ಭೀತತೆಯುಮಿರದು; ವಿಸ್ಮೃತಿಯುಮಿರದೆಂದುಂ ||ಸಾಧಿಪುದದೆಲ್ಲವನು ನಿಲದೆ; ತಪ್ಪದೆ; ಬಿಡದೆ |ಕಾತರತೆ ನಿನಗೇಕೆ? - ಮಂಕುತಿಮ್ಮ ||
ಒಂದುದಿನವೌತಣಕೆ; ಉಪವಾಸಕಿನ್ನೊಂದು |ಸಂದಣಿಯ ದಿನವೊಂದು; ಬಿಡುವು ದಿನವೊಂದು ||ಹೊಂದಿರ್ದೊಡುಭಯಮುಂ ಜೀವಕದು ಸುಖ ಚಲನ |ಒಂದುಕಾಲ್ನಡೆ ಸುಖವೆ? - ಮಂಕುತಿಮ್ಮ ||
ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |ಸಲೆ ಬಗೆಯಲದು ಪರಬ್ರಹ್ಮ ವಿಸ್ಫುರಣೆ ||ಥಳಥಳಿಕೆ ವಜ್ರದಲಿ ನೈಜವಿರುವಂತೆಯು |ಜ್ಜ್ವಲತೆ ಬೊಮ್ಮಗೆ ನೈಜ - ಮಂಕುತಿಮ್ಮ ||
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |ಧರಣಿ ಚಲನೆಯ ನಂಟು ಮರುತನೊಳ್ನಂಟು ||ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |ಕಿರಿದು ಪಿರಿದೊಂದಂಟು - ಮಂಕುತಿಮ್ಮ ||
ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |ಬೆಳಕು ವೇಗಗಳೆನಿಪ ಕಾಲ ದಿಕ್ಕುಗಳ ||ಚಲನೆಯಲಿ ವಿಶ್ವಸಂಮೋಹನಗಳೆಲ್ಲವಾ |ವಿಲಸಿತವು ಬೊಮ್ಮನದು - ಮಂಕುತಿಮ್ಮ ||
ಭೌತವಿಜ್ಞಾನಿ ರವಿತಾರೆಧರೆಗಳ ಚಲನ |ರೀತಿ ವೇಗವನಳೆದು ಶಕ್ತಿಗಳ ಗುಣಿಪನ್ ||ಪ್ರೀತಿರೋಷಗಳನವನಳೆವನೇನ್? ಅವ್ಯಕ್ತ |ಚೇತನವನರಿವನೇಂ? - ಮಂಕುತಿಮ್ಮ ||
ಮತಿ ನಯನದಂತೆ ಮುಂದಿರ್ಪುದನು ನೋಡುವುದು |ಮಿತವದರ ಕೆಲಸ; ಹೆಳವನ ಚಲನೆಯಂತೆ ||ಗತಿಶಕ್ತಿಯದಕೆ ಮನವೆಂಬ ಚರಣದ ಬಲದೆ |ಮತಿಬಿಟ್ಟ ಮನ ಕುರುಡು - ಮಂಕುತಿಮ್ಮ ||