ಒಟ್ಟು 31 ಕಡೆಗಳಲ್ಲಿ , 1 ವಚನಕಾರರು , 29 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಳುವೇನು? ನಗುವೇನು? ಹೃತ್ಕಪಾಟೋದ್ಘಾಟ |ಶಿಲೆಯೆ ನೀಂ ಕರಗದಿರಲ್? ಅರಳದಿರೆ ಮರಳೇಂ? ||ಒಳಜಗವ ಹೊರವಡಿಪ; ಹೊರಜಗವನೊಳಕೊಳುವ |ಸುಳುದಾರಿಯಳುನಗುವು - ಮಂಕುತಿಮ್ಮ ||
ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |ಮಹಿಮೆಯಿಂ ಜಗವಾಗಿ ಜೀವವೇಷದಲಿ ||ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ||
ಎದ್ದೆದ್ದು ಬೀಳುತಿಹೆ; ಗುದ್ದಾಡಿ ಸೋಲುತಿಹೆ |ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||ಉದ್ಧರಿಸುವೆನು ಜಗವನೆನ್ನುತಿಹ ಸಖನೆ; ನಿ- |ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||
ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |ಅನ್ಯಾಯ ಜಗವೆಲ್ಲ; ದೇವನಿರನೆನುತ ||ತನ್ನ ತನ್ನನುಭವವ ನಂಬಲೋರೊರ್ವನುಂ |ಭಿನ್ನವಾಗದೆ ಸತ್ಯ? - ಮಂಕುತಿಮ್ಮ ||
ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |ಬಗೆದು ಬಿಡಿಸುವರಾರು ಸೋಜಿಗವನಿದನು? ||ಜಗವ ನಿರವಿಸಿದ ಕೈಯೊಂದಾದೊಡೇಕಿಂತು |ಬಗೆಬಗೆಯ ಜೀವಗತಿ? - ಮಂಕುತಿಮ್ಮ ||
ಒಡೆಯನಾವೆಡೆ ಸಾರ್ದನೆಂದು ಪದವಾಸನೆಯ |ತಡಕಿ ಮೂಸುತ ಶುನಕನಲೆದಾಡುವಂತೆ ||ಬಡಜಗವನೊಳಿತಕೆಂದತ್ತಿತ್ತ ಪುಡುಕಿಸುವ |ಬೆಡಗು ಶಿವನೊಡವೆಯದೊ - ಮಂಕುತಿಮ್ಮ ||
ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ |ಕಲೆ ಕಣಂಗಳು ಮಾತ್ರ ಪೂರ್ಣಂಗಳಲ್ಲ ||ನಲಿವು ಚೆಲುವುಗಳ ಪರಿಪೂರ್ಣ ಮೂಲಾಕೃತಿಯೆ |ಪರಬೊಮ್ಮನೆನ್ನುವರು - ಮಂಕುತಿಮ್ಮ ||
ಕೃತ್ರಿಮವೊ ಜಗವೆಲ್ಲ | ಸತ್ಯತೆಯದೆಲ್ಲಿಹುದೊ? |ಕರ್ತೃವೆನಿಸಿದನೆ ತಾಂ ಗುಪ್ತನಾಗಿಹನು ||ಚತ್ರವೀ ಜಗವಿದರೊಳಾರ ಗುಣವೆಂತಹುದೊ! |ಯಾತ್ರಿಕನೆ; ಜಾಗರಿರೊ - ಮಂಕುತಿಮ್ಮ ||
ಗಗನ ತಲೆನವಿರಾಗೆ ಪೆರೆತಾರೆ ಹೂವಾಗೆ |ಜಗವೆಲ್ಲ ವಪುವಾಗೆ ಮಾಯೆ ಸತಿಯಾಗೆ ||ನಗುನಗುವ ಬೊಬ್ಬಿಡುವ ಜೀವತಾಂಡವರಸಿಕ |ಭಗವಂತ ಶಿವರುದ್ರ - ಮಂಕುತಿಮ್ಮ ||
ಗೌರವಿಸು ಜೀವನವ; ಗೌರವಿಸು ಚೇತನವ |ಆರದೋ ಜಗವೆಂದು ಭೇದವೆಣಿಸದಿರು ||ಹೋರುವುದೆ ಜೀವನಸಮೃದ್ಧಿಗೋಸುಗ ನಿನಗೆ |ದಾರಿಯಾತ್ಮೋನ್ನತಿಗೆ - ಮಂಕುತಿಮ್ಮ ||
ಜಗವೆನ್ನ ಮುದ್ದಿಸದದೇಕೆಂದು ಕೊರಗದಿರು |ಮಗುವು ಪೆತ್ತರ್ಗೆ ನೀಂ; ಲೋಕಕೆ ಸ್ಪರ್ಧಿ ||ಹೆಗಲಹೊರೆ ಹುಟ್ಟಿದರ್ಗೆಲ್ಲಮಿರುತಿರೆ; ನಿನ್ನ |ರಗಳೆಗಾರಿಗೆ ಬಿಡುವೊ? - ಮಂಕುತಿಮ್ಮ ||
ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ |ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು ||ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ |ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ ||
ನಗುನಗುವ ಕಣ್ಗಳಿಗೆ ಹೊಗೆಯನೂದಲುಬೇಡ |ಜಗವ ಸುಡುಗಾಡೆನುವ ಕಟುತಪಸು ಬೇಡ ||ಮಗುವು ತಾಯ್ತಂದೆಕಣ್ಮುಂದೆ ನಡೆವಂತೆ ನಡೆ |ಮಿಗೆಚಿಂತೆ ತಲೆಹರಟೆ - ಮಂಕುತಿಮ್ಮ ||
ನಯನಯುಗದಿಂ ಜಗವ ಪೊರೆದು; ನಿಟಿಲಾಕ್ಷಿಯಿಂ |ಲಯವಡಿಸುವುದದೇನು ಶಿವಯೋಗಲೀಲೆ? ||ಜಯಿಸಿ ಮದನನ ಬಳಿಕ ತನ್ನೊಡಲೊಳ್ ಉಮೆಯನ- |ನ್ವಯಿಸಿಕೊಂಡಿಹುದೇನು? - ಮಂಕುತಿಮ್ಮ ||
ನಾನೆಂಬುದೊಂದಂಶವಿತರ ಜಗವೊಂದಂಶ |ನಾನು ನೀನುಗಳಳಿದ ಸರ್ವೈಕ್ಯವೊಂದು ||ಧ್ಯಾನಿಸುತ್ತೈಕ್ಯವನು ಪಾಲಿಸುವುದುಭಯವನು |ಜಾಣಿನಾ ನಾಟಕವೊ - ಮಂಕುತಿಮ್ಮ ||