ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬು ದೇವರ; ನಂಬು; ನಂಬೆನ್ನುವುದು ಲೋಕ |ಕಂಬನಿಯನಿಡುವ ಜನ ನಂಬಲೊಲ್ಲದರೇಂ? ||ಹಂಬಲನೆ ತೊರೆದಂಗೆ ನಂಬಿಕೆಯ ಹಂಗೇಕೆ? |ತುಂಬು ವಿರತಿಯ ಮನದಿ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಬಹಿರದ್ಭುತವ ಮನುಜನಂತರದ್ಭುತವರಿತು |ಗ್ರಹಿಸುವಂತಾಗಿಸಲು ಪೂರ್ವಾನುಭವಿಗಳ್ ||ಬಹುಪರಿಯುಪಾಯಗಳ ನಿರವಿಸಿಹರದಕೇಕೆ |ಗಹಗಹಿಸುವೆಯೊ; ಮರುಳೆ? - ಮಂಕುತಿಮ್ಮ ||

ಬಹುಜನಂ ಕೈಮುಗಿದ ತೀರ್ಥದೊಳ್ ಕ್ಷೇತ್ರದೊಳ್ |ಮಹಿಮೆಯಲ್ಲೇನೆಂದು ಸಂಶಯಿಸಬೇಡ ||ವಿಹಿತಗೈದವರಾರು ವಸತಿಯಂ ದೈವಕ್ಕೆ? |ಮಹಿಮೆ ಮನಸೋತೆಡೆಯೊ - ಮಂಕುತಿಮ್ಮ ||

ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ ||ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು |ನೆನೆಯದಾತ್ಮದ ಸುಖವ - ಮಂಕುತಿಮ್ಮ ||

ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |ದೇವ ಸರ್ವೇಶ ಪರಬೊಮ್ಮನೆಂದು ಜನಂ ||ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||

ಸಾಮಾನ್ಯರೊಳ್ ಪುಟ್ಟಿ; ಸಾಮಾನ್ಯರೊಳ್ ಬೆಳೆದು |ಭೂಮಿಪತಿಪಟ್ಟವನು ಜನ ತನಗೆ ಕಟ್ಟಲ್ ||ಸಾಮರ್ಥ್ಯದಿಂದವರನಾಳ್ದ ಲಿಂಕನನಂತೆ |ಸ್ವಾಮಿ ಲೋಕಕೆ ಯೋಗಿ - ಮಂಕುತಿಮ್ಮ ||

ಸಿರಿಮಾತ್ರಕೇನಲ್ಲ; ಪೆಣ್ಮಾತ್ರಕೇನಲ್ಲ |ಕರುಬಿ ಜನ ಕೆಸರುದಾರಿಯಲಿ ಸಾಗುವುದು ||ಬಿರುದ ಗಳಿಸಲಿಕೆಸಪ; ಹೆಸರ ಪಸರಿಸಲೆಸಪ |ದುರಿತಗಳ್ಗೆಣೆಯುಂಟೆ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ