ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಿಲದೆ ನಡೆವುದು ಮೊದಲು ಕೊನೆಯಿಲ್ಲದೀಯಾಟ |ಕಳೆವುವದರಲಿ ನಮ್ಮ ಜನುಮಜನುಮಗಳು ||ಗೆಲವಾರ್ಗೊ! ಸೋಲಾರ್ಗೊ! ಲೆಕ್ಕನೋಡುವುದೆಂದೊ |ಫಲವು ಬರಿಯಾಟವೆಲೊ - ಮಂಕುತಿಮ್ಮ ||
ಮನದ ಭಾವಿತಕೊಪ್ಪುವುಪಕರಣ ನಮಗಿಲ್ಲ |ಎಣಿಕೆಗಳ ಪೂರಯಿಪ ಸಾಧನಗಳಿಲ್ಲ ||ಜನುಮಜನುಮಗಳಿಂತು ಪೇಚಾಟ; ತಿಣಕಾಟ |ಮುನಿವುದಾರಲಿ; ಪೇಳು? - ಮಂಕುತಿಮ್ಮ ||
ಮುನ್ನಾದ ಜನುಮಗಳ ನೆನಸಿನಿಂ ನಿನಗೇನು? |ಇನ್ನುಮಿಹುದಕೆ ನೀಡು ಮನವನ್; ಎನ್ನುವವೋಲ್ ||ಬೆನ್ನ ಪಿಂತಿನದು ಕಾಣಿಸದಂತೆ ಪರಮೇಷ್ಠಿ |ಕಣ್ಣನಿಟ್ಟನು ಮುಖದಿ - ಮಂಕುತಿಮ್ಮ ||