ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏಕದಿಂದಲನೇಕ ಮತ್ತನೇಕದಿನೇಕ |ವೀ ಕ್ರಮವೆ ವಿಶ್ವದಂಗಾಂಗಸಂಬಂಧ ||ಲೋಕದಲಿ ಜಾತಿಯಲಿ ವ್ಯಕ್ತಿಯಲಿ ಸಂಸ್ಥೆಯಲಿ |ಸಾಕಲ್ಯದರಿವಿರಲಿ - ಮಂಕುತಿಮ್ಮ ||
ಒಂದೆ ಗಗನವ ಕಾಣುತೊಂದೆ ನೆಲವನು ತುಳಿಯು |ತೊಂದೆ ಧಾನ್ಯವನುಣ್ಣುತೊಂದೆ ನೀರ್ಗುಡಿದು ||ಒಂದೆ ಗಾಳಿಯನುಸಿರ್ವ ನರಜಾತಿಯೊಳಗೆಂತು |ಬಂದುದೀ ವೈಷಮ್ಯ? - ಮಂಕುತಿಮ್ಮ ||
ತರುಜಾತಿ ಖಗಜಾತಿ ಮೃಗಜಾತಿಗಳು ನೂರು |ನರಜಾತಿ ಮಿಕ್ಕ ಜಾತಿಗಳಿಂದ ಬೇರೆ ||ನರರೊಳೋರೊರ್ವನುಂ ತಾನೊಂದು ಬೇರೆ ಜಗ |ಬೆರಕೆ ಸಾಮ್ಯಾಸಾಮ್ಯ - ಮಂಕುತಿಮ್ಮ ||
ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆನೆ |ನರಜಾತಿ ಸಾನುಭೂತಿಯ ಕಲಿಯಲೆಂದು ||ಪರರೆಂಬರಿಲ್ಲ ಆತ್ಮಾಂಶರೆಲ್ಲರೆನುತ್ತೆ |ಬೆರೆ ನೀನು ವಿಶ್ವದಲಿ - ಮಂಕುತಿಮ್ಮ ||
ಭೌತವಿಜ್ಞಾನ ವಿವರಗಳಿನೇನಾತ್ಮಂಗೆ? |ಪ್ರೇತಪ್ರಯಾಣಕಥೆಯೆಂತಿರ್ದೊಡೇನು? ||ಜಾತಿ ನೀತಿ ಸಮಾಜ ವರ್ಗಭೇದದಿನೇನು? |ಘಾತಿಯಿಲ್ಲಾತ್ಮಂಗೆ - ಮಂಕುತಿಮ್ಮ ||