ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂತೊ ಇಂತೋ ಎಂತೊ ಜೀವಕಥೆ ಮುಗಿಯುವುದು |ಅಂದೊ ಇಂದೋ ಎಂದೊ ಜನುಮ ಕಳೆಯುವುದು ||ಒಂದೆ ಮರೆವಿನ ಮುಸುಕು ಮುಸುಕಲಿಹುದೆಲ್ಲವನು |ಸಂತಸದ ಮಾತಿಷ್ಟೆ - ಮಂಕುತಿಮ್ಮ ||
ನಭದ ಬಲಯೊಳನಂತ; ಮನದ ಗುಹೆಯೊಳನಂತ |ವುಭಯದಾ ನಡುವೆ ಸಾದ್ಯಂತ ಜೀವಕಥೆ ||ವಿಭುವೊಬ್ಬನೀ ಗಾಳಿಬುಡ್ಡೆಗಳನೂದುವನು |ಹಬೆಗುಳ್ಳೆಯೋ ಸೃಷ್ಟಿ - ಮಂಕುತಿಮ್ಮ ||
ಮಾಯೆಯೇ ಸರಸಿ; ನಿರ್ಗುಣ ಸತ್ತ್ವದಿಂದೇನು? |ಮಾಯೆ ಬಿಡೆ ಜಗವೆತ್ತ? ಜೀವಕಥೆಯೆತ್ತ? ||ಮೇಯವಲ್ಲದ ಮಹಿಮೆ ಛಾಯೆಯಾ ಬ್ರಹ್ಮನದು |ತಾಯವಳು ನೀಂ ಮಗುವು - ಮಂಕುತಿಮ್ಮ ||