ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆ ವಿಶ್ವರೂಪ ಸಂದರ್ಶನದಿ ಹೊಂದಿಹುವು |ಜೀವ ನಿರ್ಜೀವಗಳು; ಕ್ರಮ ಯದೃಚ್ಛೆಗಳು ||ಆವಶ್ಯ ವಶ್ಯ; ಸ್ವಾಚ್ಛಂದ್ಯ ನಿರ್ಬಂಧಗಳು |ಕೈವಲ್ಯದೃಷ್ಟಿಯದು - ಮಂಕುತಿಮ್ಮ ||
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? |ಭ್ರಮಿಪುದೇನಾಗಾಗ ಕರ್ತೃವಿನ ಮನಸು? ||ಮಮತೆಯುಳ್ಳವನಾತನಾದೊಡೀ ಜೀವಗಳು |ಶ್ರಮಪಡುವುವೇಕಿಂತು? - ಮಂಕುತಿಮ್ಮ ||
ಟಗರೆರಡ ಬೆಳಸಿ ಕೊಬ್ಬಿಸಿ ಕೆಣಕಿ ಹುರಿಗೊಳಿಸಿ |ಜಗಳವಾಡಿಸಿ ದೈವಜೀವಗಳ ಪೆಸರಿಂ ||ನಗುತಲಿರುವನು ನೋಡಿ; ಪರಬೊಮ್ಮನೇಂ ಬಿನದಿ! |ಬಿಗಿಯದಿರು ನೀಂ ಬೀಗಿ - ಮಂಕುತಿಮ್ಮ ||
ತಡಕಾಟ ಬದುಕೆಲ್ಲವೇಕಾಕಿಜೀವ ತ |ನ್ನೊಡನಾಡಿ ಜೀವಗಳ ತಡಕಿ ಕೈಚಾಚಿ ||ಪಿಡಿಯಲಲೆದಾಡುಗುಂ; ಪ್ರೀತಿ ಋಣ ಮಮತೆಗಳ |ಮಡುವೊಳೋಲಾಡುತ್ತೆ - ಮಂಕುತಿಮ್ಮ ||
ಧರಣಿಗೋಳವು ಮೂಸೆ; ಜೀವಗಳನದರೊಳಗೆ |ಪರಿಶುದ್ಧಿಗೊಳಿಸುವುದು ಸಂಸಾರತಾಪ ||ಪರಿಪರಿಯ ಬಂಧುಧರ್ಮದಿನ್ ಅಹಂಮತಿ ಕರಗೆ |ಹರಡಿ ಹಬ್ಬುವುದಾತ್ಮ - ಮಂಕುತಿಮ್ಮ ||
ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ |ತಡಕಿ ನಾವಾಯ್ದಾಯ್ದು ನುಡಿಜೋಡಿಪಂತೆ ||ಬಿಡಿಜೀವ ಸಂಗಾತಿಜೀವಗಳನರಸಿ ತಾಂ |ಪಡೆದಂದು ಪೂರ್ಣವದು - ಮಂಕುತಿಮ್ಮ ||