ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರೆಗಳಿಗೆಯನುಭವವೆ ಮಾನಸವ ಕರಗಿಸದೆ? |ಪರಿಪಕ್ವಗೊಳಿಸದೇನದು ಜೀವರಸವ? ||ಉರಿ ತಣಿಪುಗಳಿನಾತ್ಮಸಂಸ್ಕಾರಗಳನೆಸಪ |ಪುರುಳ ಪುಸಿಯೆನ್ನುವೆಯ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಕಡಿದೊಡೆ ಪರೀಕ್ಷೆಗುಳಿವುವು ಸತ್ತನಾರುಗಳು |ಕಡಿಯದಿರೆ ಮರದಿ ಪರಿಯುವುದು ಜೀವರಸ ||ಬಿಡುವಮ್ ಈ ಬಾಳ್ ಅದೇಕೆಂಬ ಚರ್ಚೆಯ; ನಾವು |ದುಡಿವಮ್ ಅದು ಪೆಂಪುಗೊಳೆ - ಮಂಕುತಿಮ್ಮ ||

ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ |ಭೂಪುಟದಿ ಜೀವರಸಗಳ ಪಚಿಸುವಂತೆ ||ಪಾಪಿಯಂ ಪ್ರೋತ್ಸಹಿಸಿ ಸುಕೃತಿಯ ಪರೀಕ್ಷಿಸುತ |ವೇಪಿಪನು ವಿಧಿ ನಮ್ಮ - ಮಂಕುತಿಮ್ಮ ||

ಸ್ರವಿಸುವುದು ಜೀವರಸ ಹೃದಯಗರ್ತದ ತಳದಿ |ಕಿವಿಗಾ ರಹಸ್ಯದುಲಿ ಕಾವ್ಯಗಾನಗಳಿಂ ||ಭುವನದಾಚಿನ ರಹಸ್ಯದ ಕೀರ್ತಿ ವೇದಗಳ |ರವದಿನೆಂದಾರ್ಷಮತ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ