ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಪ್ಪಾಲೆ ತಿಪ್ಪಾಲೆ ತಿರುಗಿಬಿದ್ದವನೊಬ್ಬ |ಸ್ವಪ್ನಲೋಕದಿ ತಿರೆಯ ಮರೆತಾತನೊಬ್ಬ ||ತಪ್ಪುಸರಿಗಳ ತೂಕವಳೆಯೆ ಕುಳಿತವನೊಬ್ಬ |ಬೆಪ್ಪನಾರ್ ಮೂವರಲಿ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು |ಒಪ್ಪಿರ್ದೊಡದು ಭೋಜ್ಯವಂತು ಜೀವಿತಮುಂ ||ತಪ್ಪು ಸರಿ ಬೆಪ್ಪು ಜಾಣಂದಕುಂದುಗಳ ಬಗೆ |ಯಿಪ್ಪತ್ತು ಸೇರೆ ರುಚಿ - ಮಂಕುತಿಮ್ಮ ||

ಕಳವಳವ ನೀಗಿಬಿಡು; ತಳಮಳವ ದೂರವಿಡು |ಕಳೆ; ತಳ್ಳು ಗಲಭೆ ಗಾಬರಿಯ ಮನದಿಂದ ||ಅಲೆದಾಡುತಿರೆ ದೀಪ ಕಣ್ಗೆ ಗುರಿ ತಪ್ಪುವುದು |ತಿಳಿತಿಳಿವು ಶಾಂತಿಯಲಿ - ಮಂಕುತಿಮ್ಮ ||

ಮುಕ್ಕೋಟಿ ದೇವತೆಗಳಾಳುತಿಹ ಲೋಕದಲಿ |ದಿಕ್ಕುಗಾಣದೆ ಜೀವಿಯಲೆವುದಚ್ಚರಿಯೇಂ? ||ಒಕ್ಕಟ್ಟನೊಡೆಯರೇ ಕಲಿಯದಿರೆ ನಮ್ಮ ಗತಿ- |ಗಿಕ್ಕಟ್ಟು ತಪ್ಪುವುದೆ? - ಮಂಕುತಿಮ್ಮ ||

ರಾಗಿಮುದ್ದೆಯ ನುಂಗಿ ನಲಿದು ಬಾಳ್ವಾತಂಗೆ |ಕಾಗೆ ಕದ್ದುಣುವ ಭಕ್ಷ್ಯವ ಕಂಡು ಕರುಬೆ? ||ನೀಗುವುದು ಹಸಿವನ್ ಉಣಿಸೆಂತಪ್ಪುದಾದೊಡಂ |ಬಾಗಿಸದಿರಾತ್ಮವನು - ಮಂಕುತಿಮ್ಮ ||

ಸಿರಿದರಿದ್ರತೆಗಳ್ಗೆ ಫಲದೊಳಂತರ ಕಿರಿದು |ಸರಿತಪ್ಪುಗಳಿಗಂತು; ಜಾಣ್ ಬೆಪ್ಪುಗಳ್ಗಂ ||ಮರಣವೆಲ್ಲವನೊಂದೆ ತೆರದಿ ಮುಸುಕುವುದೆಂದೊ |ಪರವೆಯೆಂತಾದೊಡೇಂ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ