ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಮ ಬಂದಿದಿರಹುದು ಮೋಹನದ ರೂಪಿನಲಿ |ಕಿರುನಗುವು ಕುಡಿನೋಟ ಕೊಂಕುನುಡಿಗಳಲಿ ||ಕರೆದು ತಳ್ಳುವ; ತಳ್ಕರಿಸುತೊಳಗೆ ಕಿಚ್ಚಿಡುವ |ತರಳತೆಯದೇಂ ತಂತ್ರ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಕಳವಳವ ನೀಗಿಬಿಡು; ತಳಮಳವ ದೂರವಿಡು |ಕಳೆ; ತಳ್ಳು ಗಲಭೆ ಗಾಬರಿಯ ಮನದಿಂದ ||ಅಲೆದಾಡುತಿರೆ ದೀಪ ಕಣ್ಗೆ ಗುರಿ ತಪ್ಪುವುದು |ತಿಳಿತಿಳಿವು ಶಾಂತಿಯಲಿ - ಮಂಕುತಿಮ್ಮ ||

ಲೀಲೆಯೇಂ ಬಾಳೆಲ್ಲ? ಛೀ ತಳ್ಳು ಹಾಸ್ಯವನು |ಬಾಲರೇಂ ನಾವಿನ್ನುಮೆನುತ ಪಲ್ಕಡಿದು ||ಖೇಲನವ ಬೇಡವೆನುವರನು ವಿಧಿರಾಯನವ--- |ಹೇಳಿಪನು ಸೆರೆವಿಡಿದು - ಮಂಕುತಿಮ್ಮ ||

ಹೃದಯಜೀವನಕಿನಿತು ಬೆಲೆಯಿರದೆ? ಫಲವಿರದೆ? |ಮಧುರಭಾವ ಪ್ರೇಮ ದಯೆಯೆಲ್ಲ ಬರಿದೆ? ||ವಿಧಿಯಂಗಡಿಯೊಳದನು ಕಸವೆಂದು ತಳ್ಳುವೊಡೆ |ಬದುಕಿನಲಿ ತಿರುಳೇನು? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ