ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂತಾನುಮಿಂತಾನುಮೆಂತೊ ನಿನಗಾದಂತೆ |ಶಾಂತಿಯನೆ ನೀನರಸು ಮನ ಕೆರಳಿದಂದು ||ಸಂತವಿಡುತೊಮ್ಮೆ ಶಿಕ್ಷಿಸುತೊಮ್ಮೆ ಶಿಶುವೆಂದು |ಸ್ವಾಂತಮಂ ತಿದ್ದುತಿರು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |ಲೆಲ್ಲೆಲ್ಲಿಯುಂ ನೋಡಿ ನಡೆದು ನಗುತಳುತ ||ಬೆಲ್ಲ ಲೋಕಕ್ಕಾಗಿ ತನಗೆ ತಾಂ ಕಲ್ಲಾಗ |ಬಲ್ಲವನೆ ಮುಕ್ತನಲ - ಮಂಕುತಿಮ್ಮ ||

ಪ್ರಾರಬ್ಧದಲಿ ನಿನ್ನ ಪುಣ್ಯವಿನಿತಾನುಮಿರೆ |ಸೇರೆ ಪಶ್ಚಾತ್ತಾಪ ಭಾರವದರೊಡನೆ ||ದಾರುಣದ ಕರ್ಮನಿಯತಿಯನಿನಿತು ಶಿಥಿಲಿಪುದು |ಕಾರುಣ್ಯದಿಂ ದೈವ - ಮಂಕುತಿಮ್ಮ ||

ಮನುಜಲೋಕವಿಕಾರಗಳನು ನೀನಳಿಸುವೊಡೆ |ಮನಕೊಂದು ದರ್ಪಣವ ನಿರವಿಸೆಂತಾನುಂ ||ಅನುಭವಿಪರವರಂದು ತಮ್ಮಂತರಂಗಗಳ |ಅನುಪಮಾಸಹ್ಯಗಳ - ಮಂಕುತಿಮ್ಮ ||

ವ್ಯಕ್ತಿಮಾತ್ರದ ವಿಭವ ವಿಶ್ವಾತ್ಮತಾನುಭವ |ಮುಕ್ತಿ ಸುಖವಾಂತರಿಕವದು ನಿರವಧಿಸುಖ ||ಭಾಕ್ತ ಪ್ರಪಂಚಸುಖವೆಂತಪರಿಮಿತವಹುದು? |ರಿಕ್ತಸುಖ ಬಾಹ್ಯಸುಖ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ