ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತಿರುತಿರುಗಿ ತೊಳಲುವುದು ತಿರಿದನ್ನವುಣ್ಣುವುದು |ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು ||ಮರಳಿ ಕೊರಗಾಡುವುದು ಕೆರಳುವುದು ನರಳುವುದು |ಇರವಿದೇನೊಣರಗಳೆ? - ಮಂಕುತಿಮ್ಮ ||
ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ ||ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು |ನೆನೆಯದಾತ್ಮದ ಸುಖವ - ಮಂಕುತಿಮ್ಮ ||