ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಷಾಯವೇಂ ತಪಸು? ಗೃಹಲೋಕನಿರ್ವಾಹ |ವೇಷತಾಳದ ತಪಸು; ಕಠಿನತರ ತಪಸು ||ಲೇಸಿನಿಂದದು ಸಾಗೆ ಬೇಕು ಶಮ ದಮ ಸಮತೆ |ಆಸಿಧಾರವ್ರತವೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತಲೆಯಿಂದ ತಲೆಗೆ; ಪೀಳಿಗೆಯಿಂದ ಪೀಳಿಗೆಗೆ |ಅಲೆಯಿಂದಲಲೆಗೆ ಟಪ್ಪೆಯ ಚಾರನಂತೆ ||ಇಳಿಯುತಿದೆ ಯುಗದಿಂದ ಯುಗಕೆ ಮಾನವಧರ್ಮ |ನಿಲದಮೃತಧಾರೆಯದು - ಮಂಕುತಿಮ್ಮ ||

ಪದರಪದರಗಳಿಹುವು ಗಂಟುಗಂಟುಗಳಿಹುವು |ಹೃದಯದಲಿ ಬುದ್ಧಿಯಲಿ ವಾಕ್ಚರ್ಯೆಗಳಲಿ ||ಇದಮಿತ್ಥಮೆಲ್ಲಿಹುದು ಮನುಜಸ್ವಭಾವದಲಿ? |ವಿಧಿಯ ಕೈಚಿತ್ರವದು - ಮಂಕುತಿಮ್ಮ ||

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ |ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ||ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು |ಧನ್ಯನುಭಯವ ಮೀರೆ - ಮಂಕುತಿಮ್ಮ ||

ವಿಶದಮಾದೊಂದು ಜೀವನಧರ್ಮದರ್ಶನವ- |ನುಸುರಿಕೊಳೆ ತನ್ನ ಮನಸಿಗೆ ತಾನೆ ಬಗೆದು ||ನಿಸದವಂ ಗ್ರಂಥಾನುಭವಗಳಿಂದಾರಿಸುತ |ಹೊಸೆದನೀ ಕಗ್ಗವನ - ಮಂಕುತಿಮ್ಮ ||

ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು |ತೇಲುವುದಮೇಯಸತ್ತ್ವದಲಿ ಮೇಯ ಜಗ ||ಮೂಲದಶೆಯೊಳಗೊಂದು; ಮಾಪನದ ಬಗೆಗೆರಡು |ಗಾಳಿಯುಸಿರುಗಳಂತೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ