ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನಗೆ ಸುಖವಿಲ್ಲವದರಿಂ ದೇವರಿರನೆನ್ನು- |ವನುಮಿತಿಯ ನೀಂ ಗೆಯ್ಯೆ; ಸುಖಿಯದೇನೆನುವಂ? ||ತನುಬಾಹ್ಯಕರಣದನುಭವಕಿಂತ ಸೂಕ್ಷ್ಮತರ- |ದನುಭವವ ನೀನರಸೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- |ತಾವುದನುಮವನ ನಿರ್ಣಯಕೆ ಬಿಡದೆಯೆ ತಾಂ ||ದಾವನ್ತಬಡುತ ತನ್ನಿಚ್ಛೆಯನೆ ಘೋಷಿಸುವ |ಭಾವವೆಂತಹ ಭಕುತಿ? - ಮಂಕುತಿಮ್ಮ ||

ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? |ನಾವರಿಯಲಾರದೆಲ್ಲದರೊಟ್ಟು ಹೆಸರೆ? ||ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು? |ಸಾವು ಹುಟ್ಟುಗಳೇನು? - ಮಂಕುತಿಮ್ಮ ||

ದೇವರ್ಕಳುದಿಸಿ ಮರೆಯಹರು; ದೇವತ್ವ ಚಿರ |ಜಾವ ದಿನ ಬಂದು ಪೋಗುವುವು; ಕಾಲ ಚಿರ ||ಜೀವದ ವ್ಯಕ್ತಿ ಸಾಯ್ವುದು; ಜೀವಸತ್ತ್ವ ಚಿರ |ಭಾವಿಸಾ ಕೇವಲವ - ಮಂಕುತಿಮ್ಮ ||

ನಂಬು ದೇವರ; ನಂಬು; ನಂಬೆನ್ನುವುದು ಲೋಕ |ಕಂಬನಿಯನಿಡುವ ಜನ ನಂಬಲೊಲ್ಲದರೇಂ? ||ಹಂಬಲನೆ ತೊರೆದಂಗೆ ನಂಬಿಕೆಯ ಹಂಗೇಕೆ? |ತುಂಬು ವಿರತಿಯ ಮನದಿ - ಮಂಕುತಿಮ್ಮ ||

ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ |ಜೀವನಪರೀಕ್ಷೆ ಬಂದಿದಿರು ನಿಲುವನಕ ||ಭಾವಮರ್ಮಂಗಳೇಳುವುವಾಗ ತಳದಿಂದ |ದೇವರೇ ಗತಿಯಾಗ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ