ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಜೀವಿ ಬೇಡದಿರೆ ದೈವವನು ಕೇಳುವರಾರು? |ದೈವ ಗುಟ್ಟಿರಿಸದಿರೆ ಜೀವಿಯರಸುವುದೇಂ? ||ಜೀವ ದೈವಂಗಳ ಪರಸ್ಪರಾನ್ವೇಷಣೆಯೆ |ಲಾವಣ್ಯ ಸೃಷ್ಟಿಯಲಿ - ಮಂಕುತಿಮ್ಮ ||
ಪರದೈವವನು ತೊರೆಯೆ ಗತಿ ನರನಿಗಿಲ್ಲ ದಿಟ |ನರನಿಲ್ಲದಿರೆ ದೇವನನು ಕೇಳ್ವರಾರು? ||ಪುರುಷತೆಯೆ ಸೇತುವೆ ಮೃಗತ್ವದಿಂ ದಿವ್ಯತೆಗೆ |ಮುರಿಯದಿರು ಸೇತುವೆಯ - ಮಂಕುತಿಮ್ಮ ||
ಯುಕ್ತಿಸಾಮ್ರಾಜ್ಯದಲಿ ಭಕ್ತಿ ಬಡ ಪರದೇಶಿ |ಶಕ್ತಿ ಚತುರತೆಯುಡುಗಿ ನೀನು ಸೋತಂದು ||ಉತ್ಕ್ರಮಣದರೆಮನದಿ ದೈವವನು ಪಿಡಿದೇನು? |ಭಕ್ತಿ ರಕ್ತದಿ ಪರಿಗೆ - ಮಂಕುತಿಮ್ಮ ||