ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಿಯಾತೀತವನು ಪಿಡಿಯಲಿಂದ್ರಿಯಕಳವೆ? |ಇಂದ್ರಧನು ಕೈದೋಟಿ ಕೊಂಕಿಗೆಟಕುವುದೆ? ||ಸಂದೃಶ್ಯವಾತ್ಮವಾತ್ಮಕೆ ಬೇರೆ ಕರಣದಿಂ |ತಂದ್ರಿ ಬಿಡೆ ದೊರೆವುದದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ದೊರೆವ ಜೀತಕೆ ದುಡಿತ; ಮರುದಿನದ ಚಿಂತೆ ಮಿತ |ಹೊರೆಯ ಹಗುರಾಗಿಸುವ ಕೆಳೆಯರೊಡನಾಟ ||ಸರಳತೆಯ ಪರಿತುಷ್ಟಿ; ಪರಮಾರ್ಥ ದೃಷ್ಟಿಯಿವು |ಸರಿಗೂಡೆ ಸುಕೃತವದು - ಮಂಕುತಿಮ್ಮ ||

ಪರದ ಮೇಲ್ಕಣ್ಣಿಟ್ಟು ಧರೆಯ ತುಚ್ಛವೆನುತ್ತ |ತೊರೆದಾಯಸಂಗೊಳ್ಳೆ ದೊರೆವ ಫಲವೇನು? ||ಸುರಧನುವಿಗೇಣಿಯಿಡಹೊರಟು ನಿನ್ನಂಗಳದ |ಕಿರಿಹೂವ ಮರೆಯುವೆಯ - ಮಂಕುತಿಮ್ಮ ||

ಮರೆತಿಹನೆ ಬೊಮ್ಮ? ಮರೆತಿಲ್ಲ; ಮರೆತವೊಲಿಹನು |ಧರಿಸಿ ಜೀವಾಕೃತಿಯ ಜಗದಿ ತನ್ನನೆ ತಾನ್ ||ಅರಸಿಕೊಳುವವೊಲಿಹುದು; ದೊರೆತವೋಲ್ ತೋರೆ ಸುಖ |ದೊರೆವವರೆಗಾಯಸವೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ