ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |ಧರಣಿ ಚಲನೆಯ ನಂಟು ಮರುತನೊಳ್ನಂಟು ||ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |ಕಿರಿದು ಪಿರಿದೊಂದಂಟು - ಮಂಕುತಿಮ್ಮ ||
ಧರಣಿಗೋಳವು ಮೂಸೆ; ಜೀವಗಳನದರೊಳಗೆ |ಪರಿಶುದ್ಧಿಗೊಳಿಸುವುದು ಸಂಸಾರತಾಪ ||ಪರಿಪರಿಯ ಬಂಧುಧರ್ಮದಿನ್ ಅಹಂಮತಿ ಕರಗೆ |ಹರಡಿ ಹಬ್ಬುವುದಾತ್ಮ - ಮಂಕುತಿಮ್ಮ ||
ಧರೆ ಸಸ್ಯಫಲದಿ ಜೀವಿಗೆ ಪುಷ್ಟಿಯಿತ್ತೊಡೇಂ? |ಮರಳಿ ತಾಂ ಪಡೆಯಳೇನ್ ಅವನಿನರ್ಧವನು? ||ಧರಣಿಗೀ ನಮ್ಮೊಡಲು ಹುಯ್ಗಡುಬು ತಪ್ಪಲೆಯೊ! |ಪರಮೇಷ್ಠಿ ಯುಕ್ತಿಯದು - ಮಂಕುತಿಮ್ಮ ||
ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು? |ಧರಣಿಗನುದಿನದ ರಕ್ತಾಭಿಷೇಚನೆಯೆ? ||ಕರವಾಲವನು ಪುಷ್ಪಸರವೆಂದು ಸೆಳೆದಾಡೆ |ಪರಿಮಳವ ಸೂಸುವುದೆ? - ಮಂಕುತಿಮ್ಮ ||
ಮಾನವರೊ ದಾನವರೊ ಭೂಮಾತೆಯನು ತಣಿಸೆ |ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ||ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ |ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ||
ಮೆರೆಯುವುವು ನೂರಾರು ಮೈಮೆಗಳು ಸೃಷ್ಟಿಯಲಿ |ಧರಣಿಯವು; ಗಗನದವು; ಮನುಜಯತ್ನದವು ||ಪಿರಿದೆಂಬೆನವುಗಳೊಳು ಧರುಮವರಿತವನೊಲುಮೆ |ಅರಿವುಳ್ಳೊಲುಮೆ ಪಿರಿದು - ಮಂಕುತಿಮ್ಮ ||