ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು |ದೊರೆತುದ ಹಸಾದವೆಂದುಣ್ಣು ಗೊಣಗಿಡದೆ ||ಧರಿಸು ಲೋಕದ ಭರವ ಪರಮಾರ್ಥವನು ಬಿಡದೆ |ಹೊರಡು ಕರೆ ಬರಲ್ ಅಳದೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಋತುಚಕ್ರ ತಿರುಗುವುದು; ಕಾಲನೆದೆ ಮರುಗುವುದು |ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ||ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ |ಸತತ ಕೃಷಿಯೋ ಪ್ರಕೃತಿ - ಮಂಕುತಿಮ್ಮ ||

ಎದ್ದೆದ್ದು ಬೀಳುತಿಹೆ; ಗುದ್ದಾಡಿ ಸೋಲುತಿಹೆ |ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||ಉದ್ಧರಿಸುವೆನು ಜಗವನೆನ್ನುತಿಹ ಸಖನೆ; ನಿ- |ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||

ಧರಿಸಿರ್ಪುದಲ ಧರ್ಮ? ಧರಿಸು ಜೀವನಧುರವ |ಚರಿಸು ಲೋಕದ ಮಾರ್ಗಗಳಲಿ ಹಿತವರಿತು ||ಸರಿಪಡಿಸಿ ದಾರಿಗಳ ಕೆರೆ ತೋಪು ಸತ್ರಗಳ |ನೆರವಾಗು ಪಯಣಕ್ಕೆ - ಮಂಕುತಿಮ್ಮ ||

ಸಾರ್ವಭೌಮನು ಸೃಷ್ಟಿಯೊಳಗದೊರ್ವನೆ ಕಾಣೊ |ಸರ್ವವನು ತನ್ನಾತ್ಮವೆಂದು ಬದುಕುವನು ||ನಿರ್ವಿಕಾರಾಂತರಂಗದಿ ಜಗವ ಧರಿಸುವನು |ಸರ್ವಮಂಗಳನವನು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ