ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟ ಜೀವದ ಪಾಕ; ಕಷ್ಟ ಧರ್ಮವಿವೇಕ |ಎಷ್ಟೆಷ್ಟು ನೀತಿಯುಕ್ತಿಗಳ ಬಗೆದಡೆಯುಂ ||ಇಷ್ಟಷ್ಟು ನಿನ್ನೊಳ್ ಒಳತಿಳಿವಿಲ್ಲದಿರೆ ನಷ್ಟ |ದೃಷ್ಟಿಸೂಕ್ಷ್ಮವೆ ಗತಿಯೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಖದ್ಯೋತನಂತೆ ಬಿಡುಗೊಳದೆ ಧರ್ಮವ ಚರಿಸು |ವಿದ್ಯುಲ್ಲತೆಯ ತೆರದಿ ತೇಜಗಳ ಸೂಸು ||ಗೆದ್ದುದೇನೆಂದು ಕೇಳದೆ; ನಿನ್ನ ಕೈಮೀರೆ |ಸದ್ದುಮಾಡದೆ ಮುಡುಗು - ಮಂಕುತಿಮ್ಮ ||

ಗೋಳಾಡಲುಂ ಬೇಡ; ಲೋಲಾಪ್ತಿಯುಂ ಬೇಡ |ಬಾಳು ಪರಚೇತನದ ಕೇಳಿಯೆಂದೆಣಿಸಿ ||ಪಾಲಿಗನು ನೀನದರೊಳೆನಿಪಂತೆ ಬಾಳುತಿರು |ಕೇಳಿಯುಂ ಧರ್ಮವೆಲೊ - ಮಂಕುತಿಮ್ಮ ||

ಧರ್ಮವೆಂಬುದದೇನು? ಕರ್ಮವೆಂಬುದದೇನು? ||ಬ್ರಹ್ಮಾಂಡಕಥೆಯೇನು? ಜೀವಿತವಿದೇನು? |ಬ್ರಹ್ಮವೆಲ್ಲಕು ಮೂಲ ಮಾಯೆ ತತ್ಕೃತಿಜಾಲ |ಬ್ರಹ್ಮವೇ ಜೀವನವೊ - ಮಂಕುತಿಮ್ಮ ||

ನೆರಳನಿನಿತನು ಕೊಡುವ; ದಣಿವನಿನಿತನು ಕಳೆವ |ತಿರೆಯ ಪಯಣದ ಹೊರೆಯನಿನಿತು ಸುಳುವೆನಿಪಾ ||ತರುವಾಗಿ ಮನೆಯೊಳಗೊ ಹೊರಗೊ ನೀಂ ಬೆಳೆಯುತಿರೆ |ಪರಮಧರ್ಮವದೆಲವೊ - ಮಂಕುತಿಮ್ಮ ||

ಬುದ್ಧಿಪ್ರಕಾಶದಿಂದಂತರನುಭವಶೋಧೆ |ಸಿದ್ಧವಾ ಶೋಧೆಯಿಂ ಸತ್ಯಸಂವೀಕ್ಷೆ ||ಶುದ್ಧಸತ್ಯವ ಜೀವಿತಪ್ರಶ್ನೆಗನ್ವಯಿಪ |ಪದ್ಧತಿಯೆ ಧರ್ಮವೆಲೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ