ಒಟ್ಟು 10 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |ಆವನಾ ಬಂಧುತೆಯ ಜಡೆಯ ಬಿಡಿಸುವನು? ||ಜೀವ ಜೀವಕೆ ನಂಟು ಜಡ ಚೇತನಕೆ ನಂಟು |ಆವುದದಕಂಟಿರದು? - ಮಂಕುತಿಮ್ಮ ||
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |ಧರಣಿ ಚಲನೆಯ ನಂಟು ಮರುತನೊಳ್ನಂಟು ||ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |ಕಿರಿದು ಪಿರಿದೊಂದಂಟು - ಮಂಕುತಿಮ್ಮ ||
ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |ಅಂಟಿಲ್ಲವೆನಗಿದರೊಳೆನ್ನದಿರದೆಂದುಂ ||ಒಂಟಿ ನೀನೊಳಜಗಕೆ ಭಂಟ ಹೊರಜಗಕಾಗಿ |ಒಂಟಿಸಿಕೊ ಜೀವನವ - ಮಂಕುತಿಮ್ಮ ||
ನಲಿಸುವೊಲಿಸುವ; ಕೆಣಕಿ ಕಾಡಿಸುವ; ಮುಳಿಯಿಸುವ |ಕೆಳೆ ನಂಟು ಹಗೆ ಕಲಹ ಕುಹಕದೋಲೆಗಳಂ ||ಹಲಬರಿಗೆ ಹಂಚಿ ಬಾರೆಂದು ವಿಧಿ ನೇಮಿಸಿಹ |ಇಳೆಯಂಚೆಯಾಳು ನೀಂ - ಮಂಕುತಿಮ್ಮ ||