ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಗೆದು ಗೊಬ್ಬರವಿಕ್ಕಿ ನೀರೆರೆದು ತೋಟಿಗನು |ಜಗಿವ ಮುಳ್ಳಿರಿತಗಳ ಸೈರಿಸೆ ಗುಲಾಬಿ ||ನಗುವುದೊಂದರೆನಿಮಿಷ; ನಗಲು ಬಾಳ್ಮುಗಿಯುವುದು |ಮುಗುಳು ದುಡಿತಕೆ ತಣಿಸು - ಮಂಕುತಿಮ್ಮ ||
ಅಳುವೇನು? ನಗುವೇನು? ಹೃತ್ಕಪಾಟೋದ್ಘಾಟ |ಶಿಲೆಯೆ ನೀಂ ಕರಗದಿರಲ್? ಅರಳದಿರೆ ಮರಳೇಂ? ||ಒಳಜಗವ ಹೊರವಡಿಪ; ಹೊರಜಗವನೊಳಕೊಳುವ |ಸುಳುದಾರಿಯಳುನಗುವು - ಮಂಕುತಿಮ್ಮ ||
ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ? |ಓಲೆಗಳನವರವರಿಗೈದಿಸಿರೆ ಸಾಕು ||ಸಾಲಗಳೊ; ಶೂಲಗಳೊ; ನೋವುಗಳೊ; ನಗುವುಗಳೊ! |ಕಾಲೋಟವವನೂಟ - ಮಂಕುತಿಮ್ಮ ||
ಕರುಮ ಬಂದಿದಿರಹುದು ಮೋಹನದ ರೂಪಿನಲಿ |ಕಿರುನಗುವು ಕುಡಿನೋಟ ಕೊಂಕುನುಡಿಗಳಲಿ ||ಕರೆದು ತಳ್ಳುವ; ತಳ್ಕರಿಸುತೊಳಗೆ ಕಿಚ್ಚಿಡುವ |ತರಳತೆಯದೇಂ ತಂತ್ರ? - ಮಂಕುತಿಮ್ಮ ||
ಚೆಲುವುನಗುವುಗಳ ಕಂಡವನ ಕಣ್ಣರಳುವುದು |ಅಳುವುನೋವುಗಳ ಕಂಡೊದ್ದೆಯಾಗುವುದು ||ಇಳೆಯ ದನಿಗವನೆದೆಯೊಳೊಪ್ಪು ಮರುದನಿಯಹುದು |ಶಿಲೆಯಲ್ಲ ಯೋಗಿಯೆದೆ - ಮಂಕುತಿಮ್ಮ ||
ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ |ನಗುವ ಕೇಳುತ ನಗುವುದತಿಶಯದ ಧರ್ಮ ||ನಗುವ ನಗಿಸುವ ನಗಿಸಿ ನಗುತ ಬಾಳುವ ವರವ |ಮಿಗೆ ನೀನು ಬೇಡಿಕೊಳೊ - ಮಂಕುತಿಮ್ಮ ||
ಹೃದಯದಬ್ಬರವೇನು ಹೊಟ್ಟೆಯುಬ್ಬರದಂತೆ |ಅದರಿಳಿತ ಕೊರಳ ನಾಳದ ಸದ್ದಿನಿಂದ ||ಅದೆ ನಗುವು ದುಗುಡಗಳು; ಅದೆ ಹೊಗಳು ತೆಗಳುಗಳು |ಅದನಿಳಿಸೆ ಶಾಂತಿಯೆಲೊ - ಮಂಕುತಿಮ್ಮ ||