ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಲ್ಲೆಲ್ಲಿಯುಂ ಮೋಹಸಂಭ್ರಾಂತಿಗಳ ಕವಿಸಿ |ಸಲ್ಲದ ಕುಮಾರ್ಗದೊಳು ನಿನ್ನ ತಾಂ ನಡಸಿ ||ಗೆಲ್ಲಲಿಲ್ಲಿವನಾ ಪರೀಕ್ಷೆಯೊಳಗೆಂದು ವಿಧಿ |ಸೊಲ್ಲಿಪುದು ಸರಿಯೇನೊ? - ಮಂಕುತಿಮ್ಮ ||
ಧಾತ್ರಿಯನು ಮದುವೆಮಂಟಪದೊಲು ಸಿಂಗರಿಸಿ |ಕ್ಷಾತ್ರದಗ್ನಿಗಳ ನರಹೃದಯಗಳೊಳಿರಿಸಿ ||ಕೃತ್ರಿಮವನೆಡೆಬಿಡದೆ ನಡಸಿ ನಗುವ ವಿಲಾಸಿ |ಚಿತ್ರಕಾರಿಯೊ ಮಾಯೆ - ಮಂಕುತಿಮ್ಮ ||