ಒಟ್ಟು 28 ಕಡೆಗಳಲ್ಲಿ , 1 ವಚನಕಾರರು , 27 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |ಎದೆಯುಬ್ಬೆಗವನೊಂದಿ ಕುದಿಯುತಿಹುದೇಕೋ? ||ಅಧಿಕಾರಪಟ್ಟವನು ನಿನಗಾರು ಕಟ್ಟಿಹರು? |ವಿಧಿಯ ಮೇಸ್ತ್ರಿಯೆ ನೀನು? - ಮಂಕುತಿಮ್ಮ ||
ಎಡವದೆಯೆ; ಮೈಗಾಯವಡೆಯದೆಯೆ; ಮಗುವಾರು |ನಡೆಯ ಕಲಿತವನು? ಮತಿನೀತಿಗತಿಯಂತು ||ತಡವರಿಸಿ ಮುಗ್ಗರಿಸಿ ಬಿದ್ದು ಮತ್ತೆದ್ದು ಮೈ- |ದಡವಿಕೊಳುವವರೆಲ್ಲ - ಮಂಕುತಿಮ್ಮ ||
ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |ಲೆಲ್ಲೆಲ್ಲಿಯುಂ ನೋಡಿ ನಡೆದು ನಗುತಳುತ ||ಬೆಲ್ಲ ಲೋಕಕ್ಕಾಗಿ ತನಗೆ ತಾಂ ಕಲ್ಲಾಗ |ಬಲ್ಲವನೆ ಮುಕ್ತನಲ - ಮಂಕುತಿಮ್ಮ ||
ಒಡರಿಸುವನೆಲ್ಲವನ್; ಅದಾವುದುಂ ತನದಲ್ಲ |ಬಿಡನೊಂದನುಂ ರಾಜ್ಯ ತನದಲ್ಲವೆಂದು ||ನಡೆವಂ ಸ್ವತಂತ್ರದಲಿ ಸಲಿಸುತೆ ವಿಧೇಯತೆಯ |ಕಡುಯೋಗಿ ಭರತನಲ? - ಮಂಕುತಿಮ್ಮ ||
ಒಂದುದಿನವೌತಣಕೆ; ಉಪವಾಸಕಿನ್ನೊಂದು |ಸಂದಣಿಯ ದಿನವೊಂದು; ಬಿಡುವು ದಿನವೊಂದು ||ಹೊಂದಿರ್ದೊಡುಭಯಮುಂ ಜೀವಕದು ಸುಖ ಚಲನ |ಒಂದುಕಾಲ್ನಡೆ ಸುಖವೆ? - ಮಂಕುತಿಮ್ಮ ||
ಕುಸುಮಸಖನೇಂ ನೀನು? ಹಿಸುಕದೆಯೆ ಮೂಸದನು |ಹಿಸುಕೆ ಕಟುಕಂಪು; ನರಲೋಕವದರವೊಲೇ ||ಗಸಿಯ ಕಲಕದೆ ಕೊಳದ ಮೇಲ್ತಿಳಿಯ ಕುಡಿದು ನಡೆ |ಹಸನು ಹಗುರದ ಬಾಳು - ಮಂಕುತಿಮ್ಮ ||
ಚಿಂತೆಸಂತಾಪಗಳು ಮನಸಿಗೆ ವಿರೇಚಕವೊ |ಸಂತಸೋತ್ಸಾಹಗಳೆ ಪಥ್ಯದುಪಚಾರ ||ಇಂತುಮಂತುಂ ನಡೆಯುತಿರುವುದಾತ್ಮ ಚಿಕಿತ್ಸೆ |ಎಂತಾದೊಡಂತೆ ಸರಿ - ಮಂಕುತಿಮ್ಮ ||
ಜಡವೆಂಬುದೇನು? ಸೃಷ್ಟಿಯಲಿ ಚೇತನ ಸುಪ್ತಿ |ಅಡಗಿ ನಿದ್ರಿಪುದಲ್ಲಿ ಚೈತನ್ಯದಗ್ನಿ ||ಮಿಡಿಯೆ ಪರಸತ್ತ್ವ ವಿದ್ಯುದ್ದೀಪ್ತಿಯದನಾಗ |ನಡೆವುದದು ಜೀವಿವೊಲು - ಮಂಕುತಿಮ್ಮ ||
ಜೋಳಿಗೆಯ ಪಿಡಿದು ನೀನೂರಿನೂರಿಗೆ ನಡೆದು |ಹೇಳುತ್ತ ಹಾಡುಗಳ; ಭಾರಗಳ ಮರೆತು ||ಬೀಳು ಮೇಲುಗಳೆಣಿಕೆಯಿಂ ಮನವನಲುಗಿಸದೆ |ಬಾಳ ನಡಸುವುದೆಂದೊ? - ಮಂಕುತಿಮ್ಮ ||
ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |ನಿನ್ನ ಕರ್ಮದ ಹೊರೆಯ ಬಿಡದೆ ನೀನೆ ಹೊರು ||ಖಿನ್ನನಾಗದೆ ತುಟಿಯ ಬಿಗಿದು ಶವಭಾರವನು |ಬೆನ್ನಿನಲಿ ಹೊತ್ತು ನಡೆ - ಮಂಕುತಿಮ್ಮ ||
ತಲೆ ಕೊಡವ ತಳೆದಿರಲು; ಕೈ ಕತ್ತಿ ಪಿಡಿದಿರಲು |ಬಳುಕು ಹಗ್ಗದ ಮೇಲೆ ತಾನಡಿಯನಿಡುತ ||ಕೆಲ ಬಲಕೆ ಬೀಳದೆ ಮುನ್ನಡೆವ ಡೊಂಬನುಪಾಯ |ಕಲೆಯೆ ಜೀವನಯೋಗ - ಮಂಕುತಿಮ್ಮ ||
ತಿಳಿವಿಗೊಳಿತೆನಿಸಿದುದು ನಡೆಯೊಳೇತಕ್ಕರಿದು? |ಕುಳಿ ಮೇಡು ದೂರ ಮತಿಮನಸುಗಳ ನಡುವೆ ||ಒಳಗಿನಾಯೆಣ್ಣೆಬತ್ತಿಗಳೆರಡುಮೊಡವೆರೆಯೆ |ಬೆಳಕು ಜೀವೋನ್ನತಿಗೆ - ಮಂಕುತಿಮ್ಮ ||
ತ್ರಾಸಿನಲಿ ಕಪ್ಪೆಗಳ ಸರಿಕೂಡಿಸುವ ಚತುರಿ |ಸಂಸೃತಿ ದ್ವಂದ್ವಗಳ ಸಮತೂಗಲರಿವಂ ||ಬೀಸುಕತ್ತಿಗಳ ಮಧ್ಯದಿ ನೂಲಮೇಲ್ ನಡೆವ |ಸಾಸವೀ ಗೃಹಧರ್ಮ - ಮಂಕುತಿಮ್ಮ ||
ದೇಹವೆಂಬುದು ಕುದುರೆಯಾತ್ಮನದರಾರೋಹಿ |ವಾಹನವನುಪವಾಸವಿರಿಸೆ ನಡೆದೀತೆ? ||ರೋಹಿ ಜಾಗ್ರತೆದಪ್ಪೆ ಯಾತ್ರೆ ಸುಖ ಸಾಗೀತೆ? |ಸ್ನೇಹವೆರಡಕಮುಚಿತ - ಮಂಕುತಿಮ್ಮ ||
ನಗುನಗುವ ಕಣ್ಗಳಿಗೆ ಹೊಗೆಯನೂದಲುಬೇಡ |ಜಗವ ಸುಡುಗಾಡೆನುವ ಕಟುತಪಸು ಬೇಡ ||ಮಗುವು ತಾಯ್ತಂದೆಕಣ್ಮುಂದೆ ನಡೆವಂತೆ ನಡೆ |ಮಿಗೆಚಿಂತೆ ತಲೆಹರಟೆ - ಮಂಕುತಿಮ್ಮ ||