ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |ಎದೆಯುಬ್ಬೆಗವನೊಂದಿ ಕುದಿಯುತಿಹುದೇಕೋ? ||ಅಧಿಕಾರಪಟ್ಟವನು ನಿನಗಾರು ಕಟ್ಟಿಹರು? |ವಿಧಿಯ ಮೇಸ್ತ್ರಿಯೆ ನೀನು? - ಮಂಕುತಿಮ್ಮ ||
ಎಡವದೆಯೆ; ಮೈಗಾಯವಡೆಯದೆಯೆ; ಮಗುವಾರು |ನಡೆಯ ಕಲಿತವನು? ಮತಿನೀತಿಗತಿಯಂತು ||ತಡವರಿಸಿ ಮುಗ್ಗರಿಸಿ ಬಿದ್ದು ಮತ್ತೆದ್ದು ಮೈ- |ದಡವಿಕೊಳುವವರೆಲ್ಲ - ಮಂಕುತಿಮ್ಮ ||
ಚಿಂತೆಸಂತಾಪಗಳು ಮನಸಿಗೆ ವಿರೇಚಕವೊ |ಸಂತಸೋತ್ಸಾಹಗಳೆ ಪಥ್ಯದುಪಚಾರ ||ಇಂತುಮಂತುಂ ನಡೆಯುತಿರುವುದಾತ್ಮ ಚಿಕಿತ್ಸೆ |ಎಂತಾದೊಡಂತೆ ಸರಿ - ಮಂಕುತಿಮ್ಮ ||
ತಿಳಿವಿಗೊಳಿತೆನಿಸಿದುದು ನಡೆಯೊಳೇತಕ್ಕರಿದು? |ಕುಳಿ ಮೇಡು ದೂರ ಮತಿಮನಸುಗಳ ನಡುವೆ ||ಒಳಗಿನಾಯೆಣ್ಣೆಬತ್ತಿಗಳೆರಡುಮೊಡವೆರೆಯೆ |ಬೆಳಕು ಜೀವೋನ್ನತಿಗೆ - ಮಂಕುತಿಮ್ಮ ||
ಮತಿಯು ತಾಂ ಸತ್ಯಶುಭಗಳ ನವನವಾಂಶಗಳ |ಗತಿಯನರಸುತ ನಡೆಯೆ ಪೌರುಷಪ್ರಗತಿ ||ಮತ ನೀತಿ ಶಾಸ್ತ್ರಗಳು ರಾಜ್ಯಸಂಧಾನಗಳು |ಮತಿಯ ಕಿಂಚಿದ್ವಿಜಯ - ಮಂಕುತಿಮ್ಮ ||
ಮೋಕ್ಷದಾಶೆಯೊಳಮತ್ಯಾತುರತೆಯೊಳಿತಲ್ಲ |ಶಿಕ್ಷೆ ಬಹುಕಾಲ ನಡೆಯದೆ ಮೋಕ್ಷವಿಲ್ಲ ||ಲಕ್ಷ್ಯ ತಪ್ಪದೆ ಚರಿಸು ಸಾಮಾನ್ಯಧರ್ಮಗಳ |ಮೋಕ್ಷ ಸ್ವತಸ್ಸಿದ್ಧ - ಮಂಕುತಿಮ್ಮ ||
ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |ಪಾರದಿರ್ಕೆಯ ನೆನೆದು ನಡೆಯಲದು ಸಫಲ ||ಸಾರಂಗಳ್ ಎಲ್ಲ ಪಣ್ಗಳವುಮ್ ಒಂದರೊಳಿರವು |ಆರೋಗಿಸಿರುವುದನು - ಮಂಕುತಿಮ್ಮ ||
ಹೊಸತನವೆ ಬಾಳು; ಹಳಸಿಕೆಯೆಲ್ಲ ಸಾವು ಬಿಡು |ರಸವು ನವನವತೆಯಿಂದನುದಿನವು ಹೊಮ್ಮಿ ||ಹಸನೊಂದು ನುಡಿಯಲ್ಲಿ ನಡೆಯಲ್ಲಿ ನೋಟದಲಿ |ಪಸರುತಿರೆ ಬಾಳ್ ಚೆಲುವು - ಮಂಕುತಿಮ್ಮ ||