ಒಟ್ಟು 70 ಕಡೆಗಳಲ್ಲಿ , 1 ವಚನಕಾರರು , 65 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅತ್ಯಂತದುತ್ಕಟದ ಸನ್ನಿವೇಶಗಳ ಭರ |ಪ್ರತ್ಯಕ್ಷದರ್ಶನದಿನಲ್ಲದೆಂತಹುದು? ||ಪುಸ್ತಕದ ಚಿತ್ರದಿಂದೂಹಿಪೆಯ ಹಿಮಗಿರಿಯ |ವಿಸ್ತಾರದದ್ಭುತವ? - ಮಂಕುತಿಮ್ಮ ||
ಅಂದಂದಿಗಾದನಿತು ಬುಡ ಕಟ್ಟಿ ಕಳೆ ತೆಗೆದು |ಚೆಂದಳಿರು ದಿನದಿನಮುಮೊಗೆಯೆ ನೀರೆರೆದು ||ಸಂದ ಬಲದಿಂದ ಜಗದಶ್ವತ್ಥ ಸೇವೆಯಲಿ |ನಿಂದಿರುವುದಲೆ ಧರ್ಮ - ಮಂಕುತಿಮ್ಮ ||
ಅನಿಲಗುಣ ಭೂಗುಣಗಳಿಂ ಸಸ್ಯಧಾನ್ಯಗುಣ |ತನುಗುಣಗಳನ್ನದಿಂ; ಮನದ ಗುಣ ತನುವಿಂ ||ಜನಪದವಿಧಂಗಳಿಂತಾಗಿಹುವು ಸೃಷ್ಟಿಯಿನೆ |ಮನುವೊಬ್ಬ; ಜನತೆ ಶತ - ಮಂಕುತಿಮ್ಮ ||
ಅನುರಾಗದುಃಖಂಗಳೊಮ್ಮೊಮ್ಮೆ ಬಿರುಬೀಸಿ |ಮನದಿ ತೆರೆಗಳ ಕುಲುಕಿ ಕಡೆಯುವುದುಮೊಳಿತು ||ಘನ ವರ್ಷ ಬಿರುಗಾಳಿ ಬಡಿಯಲಿರುಳೊಳ್ ನೆಲನ |ದಿನದ ಸೊಗಸಿಮ್ಮಡಿಯೊ - ಮಂಕುತಿಮ್ಮ ||
ಅರೆದಿನದ ನಮ್ಮ ಯತ್ನದಿನದೇನೆನ್ನದಿರು |ಕಿರಿದುಮೊಡಗೂಡಿರಲು ಸಿರಿಯಹುದು ಬಾಳ್ಗೆ ||ಪರಿಪೋಷಿಸದೆ ನಿನ್ನೊಡಲ ದಾರಿಮರದ ಫಲ? |ಕಿರುಜಾಜಿ ಸೊಗಕುಡದೆ? - ಮಂಕುತಿಮ್ಮ ||
ಆ ವಿಶ್ವರೂಪ ಸಂದರ್ಶನದಿ ಹೊಂದಿಹುವು |ಜೀವ ನಿರ್ಜೀವಗಳು; ಕ್ರಮ ಯದೃಚ್ಛೆಗಳು ||ಆವಶ್ಯ ವಶ್ಯ; ಸ್ವಾಚ್ಛಂದ್ಯ ನಿರ್ಬಂಧಗಳು |ಕೈವಲ್ಯದೃಷ್ಟಿಯದು - ಮಂಕುತಿಮ್ಮ ||
ಆಟವೋ ಮಾಟವೋ ಕಾಟವೋ ಲೋಕವಿದು |ಊಟ ಉಪಚಾರಗಳ ಬೇಡವೆನ್ನದಿರು ||ಪಾಟವವು ಮೈಗಿರಲಿ; ನೋಟ ತತ್ತ್ವದೊಳಿರಲಿ |ಪಾಠಿಸು ಸಮನ್ವಯವ - ಮಂಕುತಿಮ್ಮ ||
ಆವ ಋಣಕೋಸುಗವೊ; ಆರ ಹಿತಕೋಸುಗವೊ |ಆವಾವ ಕಾರಣಕೊ; ಆವ ಯೋಜನೆಗೋ ||ನೋವ ನೀಂ ಪಡುವುದೇ ದೈವೇಚ್ಛೆಯಾಗಿರದೆ? |ದೈವ ಕುರುಡೆನ್ನದಿರು - ಮಂಕುತಿಮ್ಮ ||
ಆವ ಜನ್ಮದ ಋಣವೊ; ಆವ ಕರ್ಮದ ಕಣವೊ |ಮಾವಾಗಿ ಬೇವಾಗಿ ಸಂಸಾರ ವನದಿ ||ಜೀವಕೀಂಟಿಪುವು ಮಾದಕದ ರಸಪಾನಗಳ |ಭಾವಜ್ವರಂಗಳವು - ಮಂಕುತಿಮ್ಮ ||
ಋಣವ ತೀರಿಸಬೇಕು; ಋಣವ ತೀರಿಸಬೇಕು |ಋಣವ ತೀರಿಸುತ ಜಗದಾದಿಸತ್ತ್ವವನು ||ಜನದಿ ಕಾಣುತ್ತದರೊಳ್ ಒಂದುಗೂಡಲುಬೇಕು |ಮನೆಯೊಳಗೆ ಮಠ ನಿನಗೆ - ಮಂಕುತಿಮ್ಮ ||
ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |ಮೆನಿತು ನೀಂ ಪೋರ್ದೆಯೆನಿತನು ಪೊತ್ತೆಯೆನುವರ್ ||ಗಣನೆ ಸಲುವುದು ತೋರ್ದ ಪೌರುಷಕೆ; ಜಯಕಲ್ಲ |ದಿನದಿನದ ಗರಡಿಯಿದು - ಮಂಕುತಿಮ್ಮ ||
ಎಳೆಯ ತರು ದಿನದಿನವು ಹೊಸತಳಿರ ತಳೆವಂತೆ |ತಿಳಿನೀರು ಚಿಲುಮೆಯಲಿ ನಿಲದುಕ್ಕುವಂತೆ ||ಎಳೆ ಮಕ್ಕಳೊಳು ತಿಳಿವು ಮೊಳೆತು ಬೆಳೆವುದು ನೋಡು |ಇಳೆಯೊಳಗೊಂದು ಸೊಗ - ಮಂಕುತಿಮ್ಮ ||
ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ |ತೃಣ ಮೊಳೆಯುವುದು ಮರಳಿ ಹನಿಯೆರಡು ಬೀಳೆ ||ಅಣಗಿರ್ದು ನರನಾಶೆಯಂತು ಕಷ್ಟದ ದಿನದಿ |ಕುಣಿವುದನುಕೂಲ ಬರೆ - ಮಂಕುತಿಮ್ಮ ||
ಒಲ್ಲೆನೆನದಿರು ಬಾಳನ್; ಒಲವದೇನೆನ್ನದಿರು |ಉಲ್ಲಾಸಕೆಡೆಮಾಡು ನಿನ್ನಿನಾದನಿತು ||ನಿಲ್ಲು ಕೆಚ್ಚದೆಯಿಂದಲನ್ಯಾಯಗಳನಳಿಸೆ |ಎಲ್ಲಕಂ ಸಿದ್ಧನಿರು - ಮಂಕುತಿಮ್ಮ ||
ಕಡೆಗಾಲವನು ತಾನೆ ಮುನ್ನರಿತು ಕಾಡಾನೆ- |ಯಡವಿಯೊಳದೊಂದು ದೂರದ ಗವಿಯನೈದಿ ||ಬಿಡುವುದಾಯೆಡೆ ಮೌನದಿಂದಸುವನೆನ್ನುವರು |ಕಡೆಯ ಸಾರಂತು ನೀಂ - ಮಂಕುತಿಮ್ಮ ||