ಒಟ್ಟು 10 ಕಡೆಗಳಲ್ಲಿ , 1 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಜ್ಞಾತವಾದುದನಭಾವವೆನೆ ನಾಸ್ತಿಕನು |ಅಜ್ಞೇಯವೆಂದದಕೆ ಕೈಮುಗಿಯೆ ಭಕ್ತ ||ಜಿಜ್ಞಾಸ್ಯವೆಂದು ಪರಿಕಿಸತೊಡಗೆ ವಿಜ್ಞಾನಿ |ಸ್ವಜ್ಞಪ್ತಿಶೋಧಿ ಮುನಿ - ಮಂಕುತಿಮ್ಮ ||
ಏನಾದೊಡೇನು? ನೀನೆಲ್ಲಿ ಪೋದೊಡಮೇನು? |ಪ್ರಾಣವೇಂ ಮಾನವೇನಭ್ಯುದಯವೇನು? ||ಮಾನವಾತೀತವೊಂದೆಲ್ಲವನು ನುಂಗುವುದು |ಜಾನಿಸದನಾವಗಂ - ಮಂಕುತಿಮ್ಮ ||
ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ |ಕೃಮಿ ಬೀಜದಿಂ ಮತ್ಸ್ಯ ಮೃಗ ಮನುಜರಂತೆ ||ಕ್ರಮ ವಿವರವೇನಿರಲಿ ಸೃಷ್ಟಿಯ ವಿಧಾನದಲಿ |ಸಮಸದದು ಸತ್ತ್ವವನು - ಮಂಕುತಿಮ್ಮ ||
ಚೌಕಟ್ಟನಂತವದರೊಳು ಚಿತ್ರಪಟ ಸಾಂತ |ಸಾಕಾರ ಘನತತಿ ನಿರಾಕಾರ ನಭದಿ ||ಲೌಕಿಕದ ಮೌಲ್ಯ ನಿರ್ಲೌಕಿಕದ ನಾಣ್ಯದಲಿ |ಲೆಕ್ಕ ತಾತ್ತ್ವಿಕನಿಗಿದು - ಮಂಕುತಿಮ್ಮ ||
ನಭದ ಬಲಯೊಳನಂತ; ಮನದ ಗುಹೆಯೊಳನಂತ |ವುಭಯದಾ ನಡುವೆ ಸಾದ್ಯಂತ ಜೀವಕಥೆ ||ವಿಭುವೊಬ್ಬನೀ ಗಾಳಿಬುಡ್ಡೆಗಳನೂದುವನು |ಹಬೆಗುಳ್ಳೆಯೋ ಸೃಷ್ಟಿ - ಮಂಕುತಿಮ್ಮ ||
ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ |ವಹಿಸೆ ಜೀವನಭರವನದು ಹಗುರೆನಿಪವೊಲ್ ||ಸಹನೆ ಸಮರಸಭಾವವಂತಃಪರೀಕ್ಷೆಗಳು |ವಿಹಿತವಾತ್ಮದ ಹಿತಕೆ - ಮಂಕುತಿಮ್ಮ ||
ಬಿದ್ದುದನು ನಿಲ್ಲಿಪುದೆ ನರನ ಮೃತ್ಯುಂಜಯತೆ |ಶುದ್ಧಿಸದೆ ನಭ ಧರೆಯ ಮರಮರಳಿ ಮಳೆಯಿಂ? ||ಗದ್ದೆ ಕೊಯ್ಲಾಗೆ ಮಗುಳ್ದದು ಬೆಳೆಯ ಕುಡದಿಹುದೆ? |ಬಿದ್ದ ಮನೆಯನು ಕಟ್ಟೊ - ಮಂಕುತಿಮ್ಮ ||
ವೇದಗಳು ಶಾಸ್ತ್ರಗಳು ಲೋಕನೀತಿಗಳೆಲ್ಲ |ಹಾದಿತೋರಲು ನಿಶಿಯೊಳುರಿವ ಪಂಜುಗಳು ||ಸೌಧವೇರಿದವಂಗೆ; ನಭವ ಸೇರಿದವಂಗೆ |ಬೀದಿಬೆಳಕಿಂದೇನೊ? - ಮಂಕುತಿಮ್ಮ ||
ಸರಿಗೆಪಂಚೆಯೊ ಹೊದಕೆ; ಹರಕುಚಿಂದಿಯೊ ಮೈಗೆ |ಪರಮಾನ್ನಭೋಜನವೊ; ತಿರುಪೆಯಂಬಲಿಯೋ ||ಪರಿಣಾಮದಲಿ ಧನಿಕ ಬಡವರಿರ್ವರುಮೊಂದೆ |ಕರುಬು ಕೊರಗೇತಕೆಲೊ? - ಮಂಕುತಿಮ್ಮ ||
ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ |ಆಭಾಸವನು ಸತ್ಯವೆಂದು ಬೆಮಿಸುವುದುಮ್ ||ಸೌಭಾಗ್ಯಗಳನರಸಿ ದೌರ್ಭಾಗ್ಯಕೀಡಹುದುಮ್ |ಅಭಿಶಾಪ ನರಕುಲಕೆ - ಮಂಕುತಿಮ್ಮ ||