ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉರಿಯುತಿರೆ ಹೊಟ್ಟೆಕಿಚ್ಚಾರಿಸಲು ನೀರೆಲ್ಲಿ? |ನರಕವೆದೆಯಲಿ ನೆಲಸೆ ನಿದ್ದೆಗೆಡೆಯೆಲ್ಲಿ? ||ಹರಿಸಲಪ್ಪುದೆ ನರರು ಮತ್ಸರಿಯ ಸಂಕಟವ? |ಕರುಬಿದನ ಹರಿ ಪೊರೆಗೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |ಕೊರತೆಯೊಂದನು ನೀನು ನೆನೆನೆನೆದು ಕೆರಳಿ ||ಧರೆಯೆಲ್ಲವನು ಶಪಿಸಿ; ಮನದಿ ನರಕವ ನಿಲಿಸಿ |ನರಳುವುದು ಬದುಕೇನೊ? - ಮಂಕುತಿಮ್ಮ ||

ತಲೆಯ ಮೇಗಡೆ ಬೇರು; ಕೆಳಗೆ ಕೊಂಬೆಲೆ ಚಿಗುರು |ಬಿಳಲೂರೆಗಳ ಲೆಕ್ಕಕಿಲ್ಲ ಕೊನೆ ಮೊದಲು ||ಬೆಳೆವುದೀ ಪರಿಯರಳಿಮರದಂತೆ ನರಕೋಟಿ |ನಲಿವನದರಲಿ ಬೊಮ್ಮ - ಮಂಕುತಿಮ್ಮ ||

ನರಕ ತಪ್ಪಿತು ಧರ್ಮಜಂಗೆ; ದಿಟ; ಆದೊಡೇಂ? |ನರಕದರ್ಶನದುಃಖ ತಪ್ಪದಾಯಿತಲ? ||ದುರಿತತರುವಾರು ನೆಟ್ಟುದೊ; ನಿನಗಮುಂಟು ಫಲ |ಚಿರಋಣದ ಲೆಕ್ಕವದು - ಮಂಕುತಿಮ್ಮ ||

ಮಿತಿಯನರಿತಾಶೆ; ಸಮುಚಿತವ ಮರೆಯದ ಯತ್ನ |ತೈತಿಕ್ಷೆ ಕಷ್ಟಾಂಶದಪರಿಹಾರ್ಯತೆಗೆ ||ಮೃತಿಯೆ ಜೀವನಕಥೆಯ ಕೊನೆಯಲ್ಲವೆಂಬರಿವು |ಹಿತಗಳಿವು ನರಕುಲಕೆ - ಮಂಕುತಿಮ್ಮ ||

ರೇಖಾರಹಸ್ಯಗಳು ನಿನ್ನ ಹಣೆಯವದಿರಲಿ |ನೀಂ ಕಾಣ್ಪ ರೂಪಭಾವಂಗಳೊಳಮಿಹುವು ||ತಾಕಿ ನಿನ್ನಾತುಮವ ನಾಕನರಕಂಗಳಂ |ಏಕವೆನಿಪುವು ನಿನಗೆ - ಮಂಕುತಿಮ್ಮ ||

ಸರ್ವಹಿತವೊಂದುಂಟೆ? ಅದಕೆ ಪಥ ನಮಗುಂಟೆ? |ನಿರ್ವಾಹಸಾಧನಗಳೆತ್ತ? ಗುರುವೆತ್ತ? ||ಪೂರ್ವವನು ನೆಟ್ಟಗಿಪ ನರಕೃತಿಯಿನಾಗದೇನ್ |ಅರ್ವಾಚಿಯಲಿ ಸೊಟ್ಟು? - ಮಂಕುತಿಮ್ಮ ||

ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ |ಆಭಾಸವನು ಸತ್ಯವೆಂದು ಬೆಮಿಸುವುದುಮ್ ||ಸೌಭಾಗ್ಯಗಳನರಸಿ ದೌರ್ಭಾಗ್ಯಕೀಡಹುದುಮ್ |ಅಭಿಶಾಪ ನರಕುಲಕೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ