ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕತ್ತಲೆಯೊಳೇನನೋ ಕಂಡು ಬೆದರಿದ ನಾಯಿ |ಎತ್ತಲೋ ಸಖನೊರ್ವನಿಹನೆಂದು ನಂಬಿ ||ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು |ಭಕ್ತಿಯಂತೆಯೆ ನಮದು - ಮಂಕುತಿಮ್ಮ ||
ಕನಲ್ದ ಹುಲಿ ಕೆರಳ್ದ ಹರಿ ಮುಳ್ಕರಡಿ ಛಲನಾಗ |ಅಣಕು ಕಪಿ ಸೀಳ್ನಾಯಿ ಮೊದಲಾದ ಮೃಗದ ||ಸೆಣಸುಮುಸುಡಿಯ ಘೋರದುಷ್ಟಚೇಷ್ಟೆಗಳೆಲ್ಲ |ವಣಗಿಹುವು ನರಮನದಿ - ಮಂಕುತಿಮ್ಮ ||