ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಂದು ಮದುವೆಯ ಹಬ್ಬ; ನಾಳೆ ವೈಕುಂಠ ತಿಥಿ |ಇಂದು ಮೃಷ್ಟಾನ್ನಸುಖ; ನಾಳೆ ಭಿಕ್ಷಾನ್ನ ||ಇಂದು ಬರಿಯುಪವಾಸ; ನಾಳೆ ಪಾರಣೆ---ಯಿಂತು |ಸಂದಿರುವುದನ್ನಋಣ - ಮಂಕುತಿಮ್ಮ ||
ಇಂದೆದ್ದ ತೆರೆ ನಾಳೆ ಬೀಳುವುದು; ಮರುವಗಲು |ಮುಂದೆ ತಾನೇಳುವುದು ಬೇರೆ ಗಾತ್ರದಲಿ ||ಇಂದು ನಾಳೆಗಳನೆಲ್ಲವ ಕೂಡಿ ನೋಡಿದೊಡೆ |ಮುಂದಹುದು ಬೆರಗೊಂದೆ - ಮಂಕುತಿಮ್ಮ ||
ಬಾಳು ಪಾಳೆನ್ನುವರ ಬಿಟ್ಟಿಹುದೆ ಬೆದಕಾಟ? |ತಾಳಿದರೆ ಬಾಳನಂತಹರುಮ್ ಆಶೆಯಲಿ? ||ಕಾಲವಿನ್ನಿರದಿಂತು ನಾಳೆ ನೋಡುವಮೆನುತ |ಮೇಲನೆ ನಿರೀಕ್ಷಿಪರು - ಮಂಕುತಿಮ್ಮ ||
ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ||ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು |ಮತ್ತೆ ತೋರ್ಪುದು ನಾಳೆ - ಮಂಕುತಿಮ್ಮ ||
ಹರಸುವುದದೇನ ನೀಂ? ವರವದೇನೆಂದರಿವೆ? |ಸರಿಯಿಂದು ತೋರುವುದು ನಾಳೆ ಸರಿಯಿಹುದೆ? ||ನಿರುಕಿಸುವುದೆಂತು ಚಿರಕಾಲದೊಳ್ಳಿತನಿಂದು? |ಅರಿವ ದೈವವೆ ಪೊರೆಗೆ - ಮಂಕುತಿಮ್ಮ ||