ಒಟ್ಟು 16 ಕಡೆಗಳಲ್ಲಿ , 1 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |ಮಹಿಮೆಯಿಂ ಜಗವಾಗಿ ಜೀವವೇಷದಲಿ ||ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ||
ಏನೆ ನಿಜವಿರಲಿ ಮತ್ತೇನೆ ಸುಳ್ಳಾಗಿರಲಿ |ನಾನೆನಿಪ್ಪಾತ್ಮವೊಂದಿರುವುದನುಭವಿಕ ||ಹಾನಿಗಾವಾತನಾತ್ಮವನುಮಂ ಕೆಡಹದಿರು |ಧ್ಯಾನಿಸಾತ್ಮದ ಗತಿಯ - ಮಂಕುತಿಮ್ಮ ||
ಕಡಲ ಕಡೆದರು ಸುರಾಸುರರು ನಿಜಬಲದಿಂದ |ಕುಡಿದನದನು ತಪಸ್ಸಿನಿಂದ ಕುಂಭಜನು ||ಕಡಮೆಜನ ಪಾರಗಾಂಬರೆ ಗಾಸಿಯನು ಪಡದೆ? |ಪೊಡವಿ ಬಾಳ್ವೆಯುಮಂತು - ಮಂಕುತಿಮ್ಮ ||
ಜಗದ ಕಲ್ಯಾಣದೊಳಗಾತ್ಮ ಕಲ್ಯಾಣವನು |ಜಗದ ಬೀದಿಗಳೊಳು ನಿಜಾತ್ಮಯಾತ್ರೆಯನು ||ಜಗದ ಜೀವಿತದಿ ನಿಜಜೀವಿತದ ಪೂರ್ತಿಯನು |ಬಗೆಯಲರಿತವನೆ ಸುಖಿ - ಮಂಕುತಿಮ್ಮ ||
ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |ರನ್ನವೋ ಬ್ರಹ್ಮ; ನೋಡವನು---ನಿಜಪಿಂಛ ||ವರ್ಣದೆಣಿಕೆಯಲಿ ತನ್ನನೆ ಮರೆತ ನವಿಲವೊಲು |ತನ್ಮಯನೊ ಸೃಷ್ಟಿಯಲಿ - ಮಂಕುತಿಮ್ಮ ||
ತ್ಯಜಿಸಿ ಭುಜಿಸಲ್ಕಲಿತವನೆ ಜಗಕೆ ಯಜಮಾನ |ನಿಜಕುಕ್ಷಿಚಿಂತೆಯೇಂ ಮೊದಲು ಮನೆತಾಯ್ಗೆ? ||ಭುಜಿಪ ಪತಿಸುತರೊಪ್ಪು ತುಪ್ಪವವಳೂಟಕ್ಕೆ |ಭಜಿಸು ನೀನಾ ವ್ರತವ - ಮಂಕುತಿಮ್ಮ ||
ನರರವೊಲೆ ಸುರರುಮಲೆದಲೆದು ಮರೆಯಾಗಿಹರು |ಭರತದೇಶದೊಳಮೈಗುಪ್ತಯವನರೊಳಂ ||ಸುರ ನಾಮ ರೂಪಗಳಸಂಖ್ಯಾತ; ನಿಜವೊಂದು |ತೆರೆ ಕೋಟಿ ಕಡಲೊಂದು - ಮಂಕುತಿಮ್ಮ ||
ನಾಯಕನಿಗಿರಲಿ ರಣವಿಜಯ ಪರಿಭವ ಗಣನೆ |ಆಯವದರಿಂ ಭಟನ ಸತ್ತ್ವಶಿಕ್ಷಣಕೆ ||ಸ್ವೀಯ ಸತ್ತ್ವವಿಕಾಸ ನಿಜಶಕ್ತಿಯಭ್ಯಾಸ |ಶ್ರೇಯಸಿಗೆ ಸೋಪಾನ - ಮಂಕುತಿಮ್ಮ ||
ಪರಬೊಮ್ಮ ಜೀವಭೇದದಿ ನಿಜೈಕ್ಯವ ಮರೆಯೆ |ಮರಳಿ ತನ್ನೊಟ್ಟನವನರಸಲೆಚ್ಚರಿಸಲ್ ||ನರನಾರಿಯರ ಪರಸ್ಪರ ಮೋಹದಲಿ ಮಾಯೆ |ನಿರವಿಸಿಹಳಂಕುಶವ - ಮಂಕುತಿಮ್ಮ ||
ಪರಮೇಷ್ಠಿ ನಿಜಚಾತುರಿಯನಳೆಯೆ ನಿರವಿಸಿದ |ನೆರಡುಕೈಯಿಂದೆರಡು ಜಂತುಗಳ ಬಳಿಕ ||ಇರದೆ ತಾನವನೊಂದುಗೂಡಿಸಲು ಬೆರಗಾಯ್ತು |ನರಿಯು ವಾನರವು ನರ - ಮಂಕುತಿಮ್ಮ ||
ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ |ಮುಸುಕ ತಳೆದಿಹನು ಪರಬೊಮ್ಮನೆನ್ನುವೊಡೆ ||ಒಸೆದೇತಕವನೀಯನೆಮಗೊಂದು ನಿಜಕುರುಹ |ನಿಶೆಯೊಳುಡುಕರದವೊಲು? - ಮಂಕುತಿಮ್ಮ ||
ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ |ಮಹಿಮೆಯಿಂ ಸೃಜಿಸಿ ವಿಶ್ವವನಲ್ಲಿ ನೆಲಸಿ ||ವಹಿಸಿ ಜೀವತೆಯ ಮಾಯೆಯ ಸರಸವಿರಸದಲಿ |ವಿಹರಿಪನು ನಿರ್ಲಿಪ್ತ! - ಮಂಕುತಿಮ್ಮ ||
ಸುಮ್ಮನಿರಲೊಲದೆ ತನಗೊಡನಾಡಿಯೊರ್ವಳನು |ನಿರ್ಮಿಸಿ ನಿಜಾಂಶದಿಂ ಮಾಯೆಯೆಂಬವಳಿಂ ||ದುಣ್ಮಿದ ಜಗಜ್ಜಾಲಗಳಲಿ ವಿಹರಿಸುತಿರುವ |ಬೊಮ್ಮನಾಟವ ಮೆರಸೊ - ಮಂಕುತಿಮ್ಮ ||
ಹರಿಭಜಕರೊಳು ಭಯದಿನೊಗೆದುದೆನಿಬರ ಭಕುತಿ |ಮರದ ಮೇಲಣ ಭಕ್ತಿಯೆನಿಬರದು ನೋಡೆ? ||ಬರಿಯ ಸಂತೋಷದನುರಾಗರಸ ನಿಜಭಕ್ತಿ- |ಪರಮದಾಕರ್ಷೆಯದು - ಮಂಕುತಿಮ್ಮ ||
ಹೃದಯಪುಷ್ಪಮರಂದವಾತ್ಮಕೆ ನಿಜಾನಂದ |ಉದಿಪುದಾ ರಸ ಸುಂದರದ ಕಿರಣ ಸೋಕೆ ||ಬದುಕಿನೊಳ್ ಕವಿತೆಯೊಳ್ ಕಲೆಗಳೊಳ್ ಪ್ರಕೃತಿಯೊಳ್ |ಪುದಿದಿರ್ಪ ಕಾಂತಿಯದು - ಮಂಕುತಿಮ್ಮ ||