ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂತಾನುಮಿಂತಾನುಮೆಂತೊ ನಿನಗಾದಂತೆ |ಶಾಂತಿಯನೆ ನೀನರಸು ಮನ ಕೆರಳಿದಂದು ||ಸಂತವಿಡುತೊಮ್ಮೆ ಶಿಕ್ಷಿಸುತೊಮ್ಮೆ ಶಿಶುವೆಂದು |ಸ್ವಾಂತಮಂ ತಿದ್ದುತಿರು - ಮಂಕುತಿಮ್ಮ ||
ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |ಎದೆಯುಬ್ಬೆಗವನೊಂದಿ ಕುದಿಯುತಿಹುದೇಕೋ? ||ಅಧಿಕಾರಪಟ್ಟವನು ನಿನಗಾರು ಕಟ್ಟಿಹರು? |ವಿಧಿಯ ಮೇಸ್ತ್ರಿಯೆ ನೀನು? - ಮಂಕುತಿಮ್ಮ ||
ಎಲ್ಲಕಂ ನಿನಗಿಲ್ಲ ಕರ್ತವ್ಯದಧಿಕಾರ |ಇಲ್ಲದೆಯುಮಿಲ್ಲ ನಿನಗಾ ಹೊರೆಯ ಪಾಲು ||ಸಲ್ಲಿಸಾದನಿತ; ಮಿಕ್ಕುದು ಪಾಲಿಗನ ಪಾಡು |ಒಲ್ಲನವನ್ ಅರೆನಚ್ಚ - ಮಂಕುತಿಮ್ಮ ||
ಕಾಯಮಾತ್ರದುದಲ್ಲವಾತ್ಮಮಾತ್ರದುದಲ್ಲ- |ವಾಯೆರಡುಮೊಂದಾಗಲದು ಜೀವಲೀಲೆ ||ತಾಯಿವೊಲು ನಿನಗಾತ್ಮ; ಮಡದಿವೊಲು ಕಾಯವವ- |ರಾಯವನು ಸರಿನೋಡು - ಮಂಕುತಿಮ್ಮ ||
ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |ಪ್ರೇಯಸಿಯ ಕರೆವೊಲಾತುರವಡಿಪ ಬೆಡಗು ||ಈಯೆರಡು ಸಮದ ರುಚಿ ನಿನ್ನನಿಬ್ಬಗೆಗೊಳಿಸೆ |ಧ್ಯೇಯ ನಿನಗಾವುದೆಲೊ? - ಮಂಕುತಿಮ್ಮ ||
ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ||ದಿನವ ಕಳೆ; ಗುರುಶಿಷ್ಯಪಟ್ಟಗಳು ನಿನಗೇಕೆ? |ನಿನಗೆ ನೀನೇ ಗುರುವೊ - ಮಂಕುತಿಮ್ಮ ||
ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |ಎತ್ತಲಿನ ಗೊಬ್ಬರವೊ! ಎತ್ತಲಿನ ನೀರೋ! ||ಭಾಕ್ತವಾರಾರ ದುಡಿತದಿನೊ ನಿನಗಾಗಿಹುದು! |ಗುಪ್ತಗಾಮಿನಿಯೊ ಋಣ - ಮಂಕುತಿಮ್ಮ ||