ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅದು ಒಳಿತು ಇದು ಕೆಟ್ಟುದೆಂಬ ಹಟ ನಿನಗೇಕೆ? |ಹೊದಿಸಿಹುದು ದೈವವೆಲ್ಲಕಮೊಂದು ತೆರೆಯ ||ಸೊದೆಯ ಸೌರಭ ನಂಜುಬಟ್ಟಲಲಿ ತೋರೀತು |ವಿಧಿಯ ಬಗೆಯೆಂತಿಹುದೊ! - ಮಂಕುತಿಮ್ಮ ||
ಆತುರತೆಯೇನಿರದು ವಿಧಿಯಂತ್ರಚಲನೆಯಲಿ |ಭೀತತೆಯುಮಿರದು; ವಿಸ್ಮೃತಿಯುಮಿರದೆಂದುಂ ||ಸಾಧಿಪುದದೆಲ್ಲವನು ನಿಲದೆ; ತಪ್ಪದೆ; ಬಿಡದೆ |ಕಾತರತೆ ನಿನಗೇಕೆ? - ಮಂಕುತಿಮ್ಮ ||
ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ |ನಿಲ್ಲದಾಡುತ್ತಿಹುವು ಯಂತ್ರಕೀಲುಗಳು ||ಎಲ್ಲಾಗುಹೋಗುಗಳುಮಾ ಚಕ್ರಗತಿಯಂತೆ |ತಲ್ಲಣವು ನಿನಗೇಕೆ? - ಮಂಕುತಿಮ್ಮ ||
ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ||ದಿನವ ಕಳೆ; ಗುರುಶಿಷ್ಯಪಟ್ಟಗಳು ನಿನಗೇಕೆ? |ನಿನಗೆ ನೀನೇ ಗುರುವೊ - ಮಂಕುತಿಮ್ಮ ||
ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು |ಭೂವಿಷಯದಿಂದ ರಸ ಮಾರ್ಪಡುವುದುಂಟು ||ಆ ವಿವರ ನಿನಗೇಕೆ? ತೋಟದೊಡೆಯನಿಗಿರಲಿ |ಸೇವಕನು ನೀನಲ್ತೆ? - ಮಂಕುತಿಮ್ಮ ||
ಹೆಸರು ಹೆಸರೆಂಬುದೇಂ? ಕಸುರು ಬೀಸುವ ಗಾಳಿ |ಹಸೆಯೊಂದು ನಿನಗೇಕೆ ಬ್ರಹ್ಮಪುರಿಯೊಳಗೆ? ||ಶಿಶುವಾಗು ನೀಂ ಮನದಿ; ಹಸುವಾಗು; ಸಸಿಯಾಗು |ಕಸಬೊರಕೆಯಾಗಿಳೆಗೆ - ಮಂಕುತಿಮ್ಮ ||